Advertisement

ಮತಗಟ್ಟೆಯಲ್ಲಿ ಸೌಲಭ್ಯ ಲೋಪವಾದರೆ ಕಠಿನ ಕ್ರಮ: ಸಿಇಒ ಎಚ್ಚರಿಕೆ

11:12 PM Apr 12, 2019 | Sriram |

ಉಡುಪಿ: ಚುನಾವಣ ಆಯೋಗದ ಸೂಚನೆಯಂತೆ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕಾಗಿದ್ದು ಇದರಲ್ಲಿ ಯಾವುದೇ ರೀತಿಯ ಲೋಪವಾದರೆ ಸಂಬಂಧಪಟ್ಟವರ ವಿರುದ್ಧ ಕಠಿನ ಕ್ರಮ ಜರುಗಿಸುವುದಾಗಿ ಜಿ. ಪಂ. ಸಿಇಒ ಸಿಂಧೂ ಬಿ. ರೂಪೇಶ್‌ ಎಚ್ಚರಿಸಿದ್ದಾರೆ.

Advertisement

ಅವರು ಶುಕ್ರವಾರ ಜಿ.ಪಂ. ಸಭಾಂಗಣದಲ್ಲಿ ಮತಗಟ್ಟೆ ಸೌಲಭ್ಯ ಕುರಿತು ನಗರ ಸ್ಥಳೀಯ ಸಂಸ್ಥೆ ಮುಖ್ಯಾಧಿಕಾರಿಗಳು ಹಾಗೂ ಗ್ರಾ. ಪಂ. ಪಿಡಿಒಗಳ ಸಭೆಯಲ್ಲಿ ಮಾತನಾಡಿದರು.

ಪ್ರತಿಯೊಂದು ಮತಗಟ್ಟೆಯಲ್ಲಿ ಕುಡಿಯುವ ನೀರಿನ ಸೌಲಭ್ಯ, ರ್‍ಯಾಂಪ್‌, ಪೀಠೊಪಕರಣ, ಮೆಡಿಕಲ್‌ ಕಿಟ್‌, ವಿದ್ಯುತ್‌ ಸೌಲಭ್ಯ, ಮತದಾರರಿಗೆ ಹೆಲ್ಪ್ ಡೆಸ್ಕ್ ಸೌಲಭ್ಯಗಳನ್ನು ಒದಗಿಸಬೇಕು. ಇದರಲ್ಲಿ ಯಾವುದೇ ಕೊರತೆಯಾಗದಂತೆ ಗಮನಹರಿಸಬೇಕು, ಚುನಾವಣೆ ದಿನ ಇದರಲ್ಲಿ ಯಾವುದೇ ಒಂದು ಲೋಪವಾದರೂ ಸಂಬಂಧಪಟ್ಟ ಪಿಡಿಒ, ಮುಖ್ಯಾಧಿಕಾರಿ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಾಗಿ ಸಿಇಒ ಹೇಳಿದರು.

ವಿಕಲಚೇತರು ಹಾಗೂ ಹಿರಿಯ ನಾಗರಿಕರನ್ನು ಮತಗಟ್ಟೆಗೆ ಕರೆತರಲು ವಾಹನ ಸೌಲಭ್ಯ ಹಾಗೂ ವೀಲ್‌ ಚೇರ್‌ ವ್ಯವಸ್ಥೆ ಸಿದ್ದವಾಗಿಟ್ಟುಕೊಳ್ಳಬೇಕು. ರಾಜಕೀಯ ವ್ಯಕ್ತಿಗಳಿಗೆ ಸಂಬಂಧಿಸಿದ ವಾಹನಗಳಲ್ಲಿ ಅವರನ್ನು ಕರೆ ತಂದರೆ, ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಈ ನಿಟ್ಟಿನಲ್ಲಿ ಅಧಿಕಾರಿಗಳು ತತ್‌ಕ್ಷಣವೇ ಸಿದ್ದತೆ ಮಾಡಿಟ್ಟುಕೊಳ್ಳಬೇಕು ಎಂದರು.ಜಿ.ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸರಾವ್‌ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next