Advertisement

ಹಬ್ಬದ ಸಂದರ್ಭವೆಂದು ದರ ಏರಿಸಿದರೆ ಪರ್ಮಿಟ್ ರದ್ದು; ಸಾರಿಗೆ ಸಂಸ್ಥೆಗಳಿಗೆ ರಾಮುಲು ಎಚ್ಚರಿಕೆ

11:20 AM Sep 30, 2022 | Team Udayavani |

ಬೆಂಗಳೂರು: ದಸರಾ ಸಂದರ್ಭದಲ್ಲಿ ಬೆಂಗಳೂರಿನಿಂದ‌ ಬೇರೆ ಬೇರೆ ಊರುಗಳಿಗೆ ಪ್ರಯಾಣ ಬೆಳೆಸುವ ಪ್ರಯಾಣಿಕರಿಗೆ ಅಧಿಕ ದರ ವಿಧಿಸುವ ಖಾಸಗಿ ಸಾರಿಗೆ ಸಂಸ್ಥೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಈಗ ಸಾರಿಗೆ ಇಲಾಖೆ ಮುಂದಾಗಿದೆ.

Advertisement

ಈ ಬಗ್ಗೆ ಅಧಿಕೃತ ಟ್ವೀಟ್ ಮಾಡಿರುವ ಸಾರಿಗೆ ಸಚಿವ ಬಿ.ಶ್ರೀರಾಮುಲು, ನಿಗದಿತ ದರಕ್ಕಿಂತ ಹೆಚ್ಚಿನ ಹಣ ಕೀಳುವ ಸಾರಿಗೆ ಸಂಸ್ಥೆಗಳ‌ ಪರ್ಮಿಟ್ ರದ್ದು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಖಾಸಗಿ ಬಸ್ ಮಾಲೀಕರು ಪ್ರಯಾಣಿಕರಿಗೆ ತೊಂದರೆ ಕೊಡದೆ, ಯಾವ ಯಾವ ರೂಟ್‍ಗಳಿಗೆ ಎಷ್ಟು ದರ ನಿಗಧಿ ಪಡಿಸಿದೆಯೋ ಅಷ್ಟನ್ನು ಮಾತ್ರ ತೆಗೆದು ಕೊಳ್ಳಬೇಕು. ಅದನ್ನು ಬಿಟ್ಟು ಹೆಚ್ಚಿನ ಹಣ ವಸೂಲಿ ಮಾಡಿದರೆ ಕಾನೂನು ಕ್ರಮ ಜರುಗಿಸುವುದು ಅನಿವಾರ್ಯ.

ದಸರಾ ಹಬ್ಬದ ಸಂದರ್ಭದಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಮತ್ತಿತರರ ನಗರ ಪ್ರದೇಶಗಳಿಂದ ತಮ್ಮ ಗ್ರಾಮಗಳಿಗೆ ತೆರಳುವ ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರು ನಿಗದಿಪಡಿಸಿದ ದರವನ್ನಷ್ಟೇ ಪಡೆಯಬೇಕು. ಇಲ್ಲದಿದ್ದರೆ ರೂಟ್ ಪರ್ಮಿಟ್ ತಕ್ಷಣದಿಂದಲೇ ರದ್ದು ಪಡಿಸಲಾಗುತ್ತದೆ. ಯಾವುದೇ ಕಾರಣಕ್ಕೂ ರಾಜಿ ಇಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲೇ ದೂರುಗಳು ಹೆಚ್ಚಾಗಿ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರಿಂದ ಬೇಕಾಬಿಟ್ಟಿ ದರ ವಸೂಲು ಮಾಡುವುದಕ್ಕೆ ಕಡಿವಾಣ ಹಾಕಲು ಈ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಕಲಾಸಿಪಾಳ್ಯ ಬಸ್‌ ನಿಲ್ದಾಣ, ಮೆಜೆಸ್ಟಿಕ್‌ ಮತ್ತು ಸುತ್ತಲಿನ ಪ್ರದೇಶ, ಶಾಂತಿನಗರ, ಮೈಸೂರು ರಸ್ತೆ ಸೇರಿದಂತೆ ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸಲಿವೆ.

Advertisement

ಒಂದು ವೇಳೆ ಹೆಚ್ಚು ಟಿಕೆಟ್‌ ದರ ಕೇಳಿದರೆ ಪ್ರಯಾಣಿಕರು ಸಹಾಯವಾಣಿಗೆ ಕರೆ ಮಾಡಿ ಬಸ್‌ ನಂಬರ್‌, ಮಾರ್ಗ ತಿಳಿಸಿ ದೂರು ನೀಡಿದರೆ ಕ್ರಮ ತೆಗೆದುಕೊಳ್ಳಲಾಗುವುದು‌. ಇದಕ್ಕಾಗಿ ಸಾರಿಗೆ ಇಲಾಖೆಯು ಸಹಾಯವಾಣಿಯನ್ನು ಆರಂಭಿಸಿದ್ದು 94498 63429 / 94498 63426 ಸಂಪರ್ಕಿಸಬಹುದು. ಎಂದು ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next