ಚಿಕ್ಕಮಗಳೂರು: ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಲ್ಲಿ ದತ್ತಪೀಠ ಸಮಸ್ಯೆ 6 ತಿಂಗಳಲ್ಲಿ ಪರಿಹರಿಸುವುದಾಗಿ ಜೆಡಿಎಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ತಿಳಿಸಿದರು.
ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದು 6 ತಿಂಗಳಲ್ಲಿ ಸಮಸ್ಯೆ ಇತ್ಯರ್ಥಪಡಿಸದಿದ್ದಲ್ಲಿ ರಾಜಕೀಯ ನಿವೃತ್ತಿ ಪಡೆಯುವುದಾಗಿ ಸವಾಲು ಹಾಕಿದರು.
ದತ್ತ ಪೀಠದ ಸಮಸ್ಯೆ ಇನ್ನೂ ಜೀವಂತವಾಗಿರುವುದಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳೇ ಕಾರಣ. ಎರಡೂ ಪಕ್ಷಗಳು ಮತ ಬ್ಯಾಂಕ್ ಗಾಗಿ ಈ ಸಮಸ್ಯೆಯನ್ನು ಜೀವಂತವಾಗಿಟ್ಟು ರಾಜಕಾರಣ ಮಾಡುತ್ತಿವೆ ಎಂದು ತಿಳಿಸಿದರು.
ದತ್ತಜಯಂತಿ ಸಂದರ್ಭ ಕಾನೂನುಗಳನ್ನು ಗಾಳಿಗೆ ತೂರಲಾಗಿದೆ. ಶೋಭಾಯಾತ್ರೆ ವೇಳೆ ನೂರಾರು ಡಿಜೆ ಸೆಟ್ ಗಳಿಗೆ ಅನುಮತಿ ನೀಡಲಾಗಿದೆ. ಆಸ್ಪತ್ರೆ ಸಮೀಪ ಡಿಜೆ ಹಾಕಿ ರೋಗಿಗಳಿಗೆ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿದರು.
Related Articles
ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುವ ಮೂಲಕ ಬಿಜೆಪಿ ಪಕ್ಷದ ಕಾರ್ಯಕರ್ತರಂತೆ ಕಾರ್ಯನಿರ್ವಹಿಸಿದ್ದಾರೆ ಎಂದು ದೂರಿದರು.