Advertisement
ವಯನಾಡು ಭೂ ಕುಸಿತದ ಬೆನ್ನಲ್ಲೇ ರಾಜ್ಯದ ಪಶ್ಚಿಮಘಟ್ಟ ಪ್ರದೇಶದಲ್ಲಿ ಆತಂಕದ ಛಾಯೆ ಮನೆ ಮಾಡಿದ್ದು, ಒತ್ತುವರಿ ತೆರವಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಸ್ಪಷ್ಟ ಆದೇಶ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಅರಣ್ಯ ಇಲಾಖೆ 69 ಎಕರೆ ಒತ್ತುವರಿ ತೆರವುಗೊಳಿಸಿದೆ.
ರಾಜ್ಯದ 10 ಜಿಲ್ಲೆ ಗಳ ವ್ಯಾಪ್ತಿಯ ಪಶ್ಚಿಮಘಟ್ಟ ಮತ್ತು ಇತರ ಘಟ್ಟ ಪ್ರದೇಶಗಳಲ್ಲಿನ ಒತ್ತುವರಿಯನ್ನು ತತ್ ಕ್ಷಣದಿಂದಲೇ ತೆರವುಗೊಳಿಸುವಂತೆ ಖಂಡ್ರೆ ಸೂಚನೆ ನೀಡಿದ 24 ಗಂಟೆಯಲ್ಲಿ ನೂತನ ಕಾರ್ಯಪಡೆ ಅರಣ್ಯ ಭೂಮಿ ಒತ್ತುವರಿ ತೆರವು ಮಾಡಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಹೋಬಳಿಯ ಮಾಗುಂಡಿಯಲ್ಲಿ 17.17 ಎಕರೆ, ಹಲಸೂರಿನಲ್ಲಿ 13.38 ಎಕರೆ ಹಾಗೂ ತನುಡಿಯಲ್ಲಿ 36 ಎಕರೆ ಸೇರಿ ಒಟ್ಟು 69 ಎಕರೆ ಅರಣ್ಯ ಭೂಮಿ ತೆರವು ಮಾಡಿಸಲಾಗಿದೆ. ಪಶ್ಚಿಮಘಟ್ಟ ಮತ್ತು ಅರಣ್ಯ ಒತ್ತುವರಿ ತೆರವು ಕಾರ್ಯಪಡೆಯ ಅಧ್ಯಕ್ಷರಾಗಿರುವ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ದೀಕ್ಷಿತ್ ಅವರ ಆದೇಶದಂತೆ ಈ ಕ್ರಮ ಜರಗಿಸಲಾಗಿದೆ. ಕಸ್ತೂರಿ ರಂಗನ್ ವರದಿ ಮತ್ತೆ ಮುನ್ನೆಲೆಗೆ
ಇದೆಲ್ಲ ವಿಚಾರಗಳ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಈಗ ಮತ್ತೂಂದು ಅಧಿಸೂಚನೆ ಹೊರಡಿಸಿದೆ. ರಾಜ್ಯದ 20,668 ಚದರ ಕಿಲೋ ಮೀಟರ್‌ಗೂ ಹೆಚ್ಚು ವಿಸ್ತೀರ್ಣವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಹೇಳಿದೆ. ರಾಜ್ಯದ 10 ಜಿÇÉೆಗಳ ಅಂದರೆ ಚಾಮರಾಜನಗರ, ಕೊಡಗು, ಮೈಸೂರು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಬೆಳಗಾವಿಯ 33 (ತಾಲೂಕು ಪುನರ್ ವಿಂಗಡಣೆಯ ಅನಂತರ 39) ತಾಲೂಕುಗಳ 1,533 ಗ್ರಾಮಗಳನ್ನು ಗುರುತಿಸಲಾಗಿದೆ ಎಂದರು.
Related Articles
Advertisement