Advertisement

ಬಹುಮತ ಬಂದರೆ ಸಿದ್ದು ಸಿಎಂ: ರೆಡ್ಡಿ

06:25 AM May 15, 2018 | Team Udayavani |

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವೇ ಸ್ಪಷ್ಟ ಬಹುಮತ ಪಡೆಯಲಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿಯೇ ಚುನಾವಣೆ ಎದುರಿಸಿರುವುದರಿಂದ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಗುಪ್ತಚರ ಇಲಾಖೆ ಮಾಹಿತಿ ಪ್ರಕಾರ ಕಾಂಗ್ರೆಸ್‌ ಪಕ್ಷ ಸ್ಪಷ್ಟ ಬಹುಮತ ಪಡೆಯಲಿದೆ. ಹೀಗಾಗಿ ಅತಂತ್ರ ವಿಧಾನಸಭೆಯ ಬಗ್ಗೆ ಮಾತನಾಡುವ ಪ್ರಮೇಯವೇ ಬರುವುದಿಲ್ಲ. ಸರಳ ಬಹುಮತ ಪಡೆದರೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದರು. ಇನ್ನು ಜಯನಗರ ಕ್ಷೇತ್ರದಲ್ಲಿ ಬಿಜೆಪಿಯಿಂದ ಯಾರೇ ಅಭ್ಯರ್ಥಿಯಾದರೂ ತೊಂದರೆ ಇಲ್ಲ. ಚುನಾವಣೆ ಘೋಷಣೆಯಾದ ಮೇಲೆ ಪ್ರಚಾರ ಕಾರ್ಯ ಆರಂಭಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next