Advertisement
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ರಾಮನಗರ ನಗರ ಸಭೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಕಂಪನಿಗಳ ಸಂಯುಕ್ತಾಶ್ರ ಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಹಾಗೂ ಪ್ಲಾಸ್ಟಿಕ್ ಮುಕ್ತ ಸಮಾಜಕ್ಕಾಗಿ ಜಾಥಾ ಕಾರ್ಯಕ್ರಮ ಅಧ್ಯಕ್ಷತೆಯನ್ನುವಹಿಸಿ ಅವರು ಮಾತನಾಡಿದರು. ಪ್ಲಾಸ್ಟಿಕ್‌ನ ಅತಿಯಾದ ಬಳಕೆಯಿಂದಾಗಿ ಇಂದು ಪರಿಸರ ಹಾಳಾಗುತ್ತಿದೆ. ಕಾರಣ ಪ್ಲಾಸ್ಟಿಕ್ ಕೊಳೆಯುವ ವಸ್ತುವಲ್ಲ. ಪ್ಲಾಸ್ಟಿಕ್ ಸುಡುವುದರಿಂದ ಪರಿಸರ ಇನ್ನಷ್ಟು ಬೇಗ ಹಾಳಾಗುತ್ತದೆ. ಆಹಾರ ತಯಾರಿಕೆಯಲ್ಲಿ, ಶೇಖರಣೆಗೆ ಪ್ಲಾಸ್ಟಿಕ್ ಬಳಕೆ ಮಾನವನ ಆರೋಗ್ಯದ ಮೇಲೆ ಕಟ್ಟ ಪರಿಣಾಮ ಬೀರುತ್ತಿದೆ. ಹಿಂದಿನ ದಿನಗಳಲ್ಲಿ ತರಕಾರಿ ಸೇರಿದಂತೆ ಮನೆಗೆ ಬೇಕಾದ ವಸ್ತುಗಳನ್ನು ತರಲು ಬಟ್ಟೆ ಬ್ಯಾಗ್‌ನ್ನು ಮಾರುಕಟ್ಟೆಗೆ ತೆಗೆದುಕೊಂಡು ಹೋಗಲಾಗುತ್ತಿತ್ತು. ಆದರೆ ಕೆಲವು ವರ್ಷಗಳಲ್ಲಿ ಬಹಳಷ್ಟು ಜನ ಪ್ಲಾಸ್ಟಿಕ್ ಕವರಗಳನ್ನು ಬಳಸುತ್ತಿದ್ದಾರೆ. ಇದೊಂದು ಉದಾಹರಣೆಯಷ್ಟೆ, ನಿತ್ಯ ಜೀವನದಲ್ಲಿ ಪ್ಲಾಸ್ಟಿಕ್ ಅತಿಯಾಗಿ ಬಳಕೆಯಾಗುತ್ತಿದೆ ಎಂದು ವಿಷಾಧಿಸಿದರು.
Advertisement
ನಿಯಮ ಉಲ್ಲಂ ಸಿದರೆ ಕಠಿಣ ಕ್ರಮ
12:58 PM Jul 07, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.