Advertisement

ನೀರು ಕೊಡದಿದ್ದರೆ ಮತದಾನ ಬಹಿಷ್ಕಾರ

12:36 PM Apr 27, 2018 | |

ನಂಜನಗೂಡು: ಒಂದು ವರ್ಷದ ಹಿಂದೆ ಉಪ ಚುನಾವಣೆ ವೇಳೆ ಭೂಮಿಪೂಜೆ ನೆರವೇರಿಸಿದ ರಸ್ತೆ, ಚರಂಡಿ  ಕಾಮಗಾರಿಗಳನ್ನು ಪೂರ್ಣಗೊಳಿಸಿ, ಸಮುರ್ಪಕ ಕುಡಿವ ನೀರು ಪೂರೈಸದಿದ್ದರೆ ಚುನಾವಣೆ ಬಹಿಷ್ಕರಿಸುವುದಾಗಿ ತಾಲೂಕಿನ ಹೊರಳವಾಡಿ ಹೊಸೂರು ಗ್ರಾಮಸ್ಥರು ಖಾಲಿ ಕೊಡ ಹಿಡಿದು ರಸ್ತೆ ತಡೆ ಮಾಡಿ ಎಚ್ಚರಿಕೆ ನೀಡಿದರು.

Advertisement

ಗ್ರಾಮದಲ್ಲಿನ ರಸ್ತೆ, ಚರಂಡಿ ಕಾಮಗಾರಿ ನಿರ್ಮಾಣಕ್ಕೆ ಕಳೆದ ವರ್ಷವೇ ಗುದ್ದಲಿಪೂಜೆ ನೆರವೇರಿಸಲಾಯಿತು. ಆದರೆ, ಇಂದಿಗೂ ಕಾಮಗಾರಿ ಆರಂಭಗೊಳ್ಳುವ ಯಾವುದೇ ಮುನ್ಸೂಚನೆ ಕಾಣುತ್ತಿಲ್ಲ. ಅದು ಉಪಚುನಾವಣೆಯ ಗಿಮಿಕ್‌ ಆಗಿದ್ದೂ ಈಗ ಮತ್ತೆ ಚುನಾವಣೆ ಬಂದಿದೆ. ಈಗಲಾದರೂ ಕಾಮಗಾರಿ ಪ್ರಾರಂಭಿಸದಿದ್ದರೆ ನಮ್ಮ ಮತ ಯಾರಿಗೂ ಹಾಕದೆ ಚುನಾವಣೆಯನ್ನೇ ಬಹಿಷ್ಕರಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತು ಚುನಾವಣಾಧಿಕಾರಿಗಳಿಗೆ ಲಿಖೀತ ಪತ್ರ ಬರೆದು ಅವರ ಗಮನ ಸೆಳೆಯಲಾಗಿದೆ. ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತಾರಕಕ್ಕೇರಿದೆ. ರಸ್ತೆಗಳು ಸಂಪೂರ್ಣ ಹಾಳಾಗಿವೆ. ಸ್ಮಶಾನ ಜಾಗ ಗುರುತಿಸುವಂತೆ ಬೇಡಿಕೆ ಇಟ್ಟರೂ ಪ್ರಯೋಜನವಾಗಿಲ್ಲ. ಕನಕ ಭವನ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಂತಿದೆ.

ಈ ಎಲ್ಲಾ ಅಪೂರ್ಣ ಕಾಮಗಾರಿಗಳನ್ನು ಪೂರ್ಣಗೊಳಿಸದಿದ್ದರೆ ಚುಣಾವಣೆಯಲ್ಲಿ ಮತದಾನ ಬಹಿಷ್ಕರಿಸುವುದಾಗಿ ಗ್ರಾಮಸ್ಥರೆಲ್ಲರೂ ಒಕ್ಕೊರಲಿನ ನಿರ್ಧಾರ ತೆಗೆದುಕೊಂಡಿರುವುದಾಗಿ ಘೋಷಿಸಿದರು. ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಪುಟ್ಟಸ್ವಾಮಿ, ಮಾದೇಗೌಡ, ಮಲ್ಲೇಗೌಡ, ಸುಂದರಮ್ಮ, ಕೆಂಪಮ್ಮ ಇತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next