Advertisement
ನಗರದ ಜಿಪಂ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೆಆರ್‌ಐಡಿಎಲ್‌ಗೆ ನೀಡಿದ 2016-17, 2017-18ನೇ ಸಾಲಿನ ಕಾಮಗಾರಿಗಳನ್ನು ಇದುವರೆಗೂ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಈ ಸಾಲಿನ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಂತಿಮವಾಗಿ ಡಿಸೆಂಬರ್-2019ರ ವರೆಗೆ ಕಾಲಮಿತಿ ನಿಗದಿ ಪಡಿಸಿದೆ. ಅಷ್ಟರಲ್ಲಿ ಕಾಮಗಾರಿ ಪೂರ್ಣಗೊಳ್ಳದಿದ್ದರೆ ಆ ಅವಧಿವರೆಗಿನ ಕಾಮಗಾರಿ ವೆಚ್ಚವನ್ನು ಮಾತ್ರ ಮಂಡಳಿಯಿಂದ ಬಿಡುಗಡೆ ಮಾಡಲಾಗುವುದು. ಬಾಕಿ ಅನುದಾನವನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ. ಹಾಗೂ ಬಾಕಿ ಉಳಿದ ಕಾಮಗಾರಿಗೆ ಸಂಬಂಧಿಸಿದ ಅನುಷ್ಠಾನ ಏಜೆನ್ಸಿಯನ್ನೇ ನೇರ ಹೊಣೆ ಮಾಡಲಾಗುವುದು ಎಂದರು.
Related Articles
Advertisement
ಕೆಕೆಆರ್‌ಡಿಬಿ ಅನುದಾನದಡೆ ಜಿಲ್ಲೆಯ ವಿವಿಧೆಡೆ ನಿರ್ಮಾಣವಾಗುತ್ತಿರುವ ಬಸ್‌ನಿಲ್ದಾಣಗಳ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಬಸ್ ನಿಲ್ದಾಣವನ್ನು ಶೀಘ್ರ ಉದ್ಘಾಟಿಸಬೇಕು ಎಂದು ಎನ್‌ಇಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಸತಿ ಶಾಲೆಗಳ ಕಟ್ಟಡ, ಗಂಗಾವತಿಯ ಪ್ರಥಮ ದರ್ಜೆ ಕಾಲೇಜು ಕಟ್ಟಡ ಕಾಮಗಾರಿ, ಜಿಲ್ಲೆಯ ವಿವಿಧೆಡೆ ಸ್ಥಾಪಿಸಬೇಕಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಕಾಮಗಾರಿ, ಮುಂತಾದವುಗಳ ಕುರಿತು ಪ್ರಗತಿ ವರದಿ ಪರಿಶೀಲಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್, ಜಿಪಂ ಸಿಇಒ ರಘುನಂದನ್ ಮೂರ್ತಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ನೇಹಾ ಜೈನ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಅನುಷ್ಠಾನ ಏಜೆನ್ಸಿಗಳ ಅಧಿ ಕಾರಿಗಳು ಉಪಸ್ಥಿತರಿದ್ದರು.