Advertisement

ಸಮಸ್ಯೆ ಎದುರಾದರೆ ಸಂಪರ್ಕಿಸಿ: ಶಾಸಕ

09:37 PM Aug 19, 2019 | Lakshmi GovindaRaj |

ತಿ.ನರಸೀಪುರ: ಕೃಷಿ ಪರಿಕರ, ಗೊಬ್ಬರ, ಬಿತ್ತನೆ ಬೀಜ ಮತ್ತಿತರ ಸಮಸ್ಯೆಗಳು ಎದುರಾದರೆ ರೈತರು ನೇರವಾಗಿ ತಮ್ಮನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಶಾಸಕ ಎಂ.ಅಶ್ವಿ‌ನ್‌ ಕುಮಾರ್‌ ತಿಳಿಸಿದರು. ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಂಸದರ ಆದರ್ಶ ಗ್ರಾಮ ಹಾಗು ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

Advertisement

ಸಮಗ್ರ ಅಭಿವೃದ್ಧಿ: ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರದಿಂದ ಅಗತ್ಯ ಅನುದಾನ ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಕೊಟ್ಟ ಮಾತಿನಂತೆ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಶಕ್ತಿ ಮೀರಿ ದುಡಿಯುತ್ತಿದ್ದು ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಅನುದಾನ ತರಲಾಗುವುದು ಎಂದು ಭರವಸೆ ನೀಡಿದರು.

ನಾಲೆಗಳಿಗೆ ನೀರು: ಈಗಾಗಲೇ ತಾಲೂಕಿನ ಎಲ್ಲಾ ನಾಲೆಗಳಿಗೂ ನೀರು ಹರಿಸಲು ಕ್ರಮ ಕೈಗೊಳ್ಳಲಾಗಿದ್ದು, ರೈತರು ಯಾವುದೇ ಆತಂಕಕ್ಕೆ ಒಳಗಾಗದೇ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಹುದಾಗಿದೆ. ಕೃಷಿ ಸಂಬಂಧ ಸಮಸ್ಯೆಗಳಿದ್ದರೆ ತಮ್ಮನ್ನು ಖುದ್ದಾಗಿ ಭೇಟಿ ನೀಡಿ, ಸೌಲಭ್ಯ ಪಡೆದುಕೊಳ್ಳಬಹುದು ಎಂದು ಹೇಳಿದರು. ಗ್ರಾಮ ವಿಕಾಸ ಯೋಜನೆಯಡಿ ಗ್ರಾಮಗಳ ಮೂಲಭೂತ ಸೌಕರ್ಯಕ್ಕಾಗಿ ಸರ್ಕಾರ ಅನುದಾನವನ್ನು ಕಂತಿನ ಮೂಲಕ ಬಿಡುಗಡೆ ಮಾಡುತ್ತಿದ್ದು, ಗ್ರಾಮಸ್ಥರು ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಗುಣಮಟ್ಟ ಪರಿಶೀಲಿಸಬೇಕು ಎಂದು ಮನವಿ ಮಾಡಿದರು.

ಶಾಶ್ವತ ಪರಿಹಾರ: ಇದೇ ಸಂದರ್ಭದಲ್ಲಿ ಕೆಲವು ನದಿ ತೀರದ ಗ್ರಾಮಸ್ಥರು ಪ್ರವಾಹ ಬಂದಾಗ ಗ್ರಾಮಗಳು ಸಂಪೂರ್ಣ ಜಲಾವೃತವಾಗುತ್ತಿದ್ದು ಇದನ್ನು ತಪ್ಪಿಸಲು ಶಾಶ್ವತ ಪರಿಹಾರ ಕಂಡುಕೊಳ್ಳಲು ಯೋಜನೆ ರೂಪಿಸುವಂತೆ ಆಗ್ರಹಿಸಿದರು. ಇದಕ್ಕೆ ಸ್ಪಂದಿಸಿದ ಶಾಸಕರು, ಈ ಸಂಬಂಧ ಅಗತ್ಯ ಕ್ರಮಕ್ಕೆ ಮುಂದಾಗುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಮಾಜಿ ಉಪಾಧ್ಯಕ್ಷ ಕೈಯಂಬಳ್ಳಿ ನಟರಾಜು, ಜಿಪಂ ಸದಸ್ಯರಾದ ಟಿ.ಎಚ್‌.ಮಂಜುನಾಥನ್‌, ಜೈಪಾಲ್‌ ಭರಣಿ, ಜೆಡಿಎಸ್‌ ಕ್ಷೇತ್ರಾಧ್ಯಕ್ಷ ಚಿನ್ನಸ್ವಾಮಿ, ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಪ್ರಕಾಶ್‌, ಗುರುಮೂರ್ತಿ, ಕುಮಾರ ಶಂಭುದೇವನಪುರ ರಮೇಶ್‌, ಹೆಮ್ಮಿಗೆ ಹೊನ್ನನಾಯಕ, ಸೋಮಣ್ಣ, ದೀಪು ದರ್ಶನ್‌, ಗುತ್ತಿಗೆದಾರ ಮಹದೇವಸ್ವಾಮಿ, ಸಿಡಿಪಿಒ ಬಸವರಾಜು, ಅಧಿಕಾರಿಗಳಾದ ವಿಕಾಸ್‌, ನವೀನ್‌, ಸಿದ್ದರಾಜು ಮತ್ತಿತರರು ಉಪಸ್ಥಿತರಿದ್ದರು.

Advertisement

ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿ: ತಾಲೂಕಿನಲ್ಲಿ ಮೂರು ಕೋಟಿ ರೂ. ವೆಚ್ಚದ ಅನುದಾನದಡಿ ಹಿರಿಯೂರು, ಮಾದಾಪುರ, ಹೆಮ್ಮಿಗೆ, ಮರಡೀಪುರ, ಶಂಭುದೇವನಪುರ ಗ್ರಾಮಗಳಲ್ಲಿ ಸಿಮೆಂಟ್‌ ರಸ್ತೆ ಕಾಮಗಾರಿಗೆ ಶಾಸಕ ಅನಿಲ್‌ ಕುಮಾರ್‌ ಭೂಮಿ ಪೂಜೆ ನೆರೆವೇರಿಸಿದರು. ಗೆಡ್ಡೆಹುಂಡಿ ಗ್ರಾಮದಲ್ಲಿ ನೂತನ ಅಂಗನವಾಡಿ ಕಟ್ಟಡ, ಶಂಭುದೇವನಪುರ ಹಾಗು ದೊಡ್ಡನಹುಂಡಿ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next