Advertisement
ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆಯ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನಡೆದ ವಿಶ್ವ ಗ್ರಾಹಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಹಕರ ಹಕ್ಕುಗಳು ಮತ್ತು ಅಗತ್ಯತೆಗಳ ಬಗ್ಗೆ ಜಾಗತಿಕ ಜಾಗೃತಿ ಮೂಡಿಸಲು, ಮಾರುಕಟ್ಟೆಯಲ್ಲಿನ ದುರುಪಯೋಗದ ಬಗ್ಗೆ ಅರಿವು ಮೂಡಿಸಲು ವಿಶ್ವ ಗ್ರಾಹಕರ ದಿನ ಆಚರಿಸಲಾಗುತ್ತಿದೆ ಎಂದರು.
Related Articles
Advertisement
ಐಒಸಿಎಲ್‌ಪಿಜಿ ಮುಖ್ಯ ವ್ಯವಸ್ಥಾಪಕ ಎಂ.ಎಸ್. ಜೋಶಿ ಅವರು ಎಲ್‌ಪಿಜಿ ಸುರಕ್ಷತೆ ಕುರಿತು ಉಪನ್ಯಾಸ ನೀಡಿ, ಎಲ್‌ಪಿಜಿ ಗ್ಯಾಸ್ ಬಳಕೆ, ಅವುಗಳ ತೂಕ, ಆನ್‌ಲೈನ್ ಬುಕಿಂಗ್ ಮತ್ತು ಡಿಜಿಟಲ್ ವ್ಯವಹಾರದ ಬಗ್ಗೆ ಮಾಹಿತಿ ನೀಡಿದರು. ಹೆಚ್ಚುವರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಸಂಜೀವ ಕುಲಕರ್ಣಿ ಮಾತನಾಡಿ, ಗ್ರಾಹಕರು ಸರಕು ಖರೀದಿ, ಸೇವೆಗಳ ಗುಣಮಟ್ಟದ ನ್ಯೂನ್ಯತೆಗಳು, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಆಯೋಗ, ರಾಜ್ಯಮಟ್ಟದ ಗ್ರಾಹಕರ ವ್ಯಾಜ್ಯಗಳ ಆಯೋಗ ಮತ್ತು ರಾಷ್ಟ್ರ ಮಟ್ಟದ ಗ್ರಾಹಕರ ವ್ಯಾಜ್ಯಗಳ ಆಯೋಗಗಳಲ್ಲಿ ದೂರುಗಳ ದಾಖಲಿಸುವ ಬಗ್ಗೆ ವಿವರಿಸಿ, ಗ್ರಾಹಕರು ದೂರು ದಾಖಲಿಸಿದ 90 ದಿವಸದೊಳಗಾಗಿ ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗುವುದು ಎಂದರು.
ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಚನ್ನಬಸಪ್ಪ ವಿ ಕೊಡ್ಲಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಸುನಂದಾ ಕಾದೊಳ್ಳಿಮಠ, ಬಿ.ಯು. ಗೀತಾ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಸಹಾಯಕ ನಿಯಂತ್ರಕ ಎಸ್. ಎಸ್. ಉಪ್ಪಾರ ಇದ್ದರು. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕ ಅಶೋಕ ಗುರಾಣಿ ವಂದಿಸಿದರು. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಹಾಯಕ ನಿರ್ದೇಶಕ ಜೆ.ಸಿ. ಅಷ್ಟಗಿಮಠ ನಿರೂಪಿಸಿದರು.