Advertisement
-ಚರ್ಮದ ದುರ್ಗಂಧವನ್ನು ನಿವಾರಿಸಲು ತಾಜಾ ಬಿಲ್ವಪತ್ರೆ ರಸವನ್ನು ಪ್ರತಿದಿನ ಮೈಗೆ ಲೇಪಿಸಿಕೊಂಡು ಅರ್ಧಗಂಟೆಯ ನಂತರ ಸ್ನಾನ ಮಾಡಬೇಕು.
Related Articles
Advertisement
-ನಿದ್ರಾಹೀನತೆಯಿಂದ ಬಳಲುತ್ತಿರುವವರು, ಬಿಲ್ವದ ಎಲೆಯನ್ನು ನೀರು ಸೇರಿಸದೆ ಅರೆದು ಹಣೆಗೆ ಲೇಪಿಸಿಕೊಳ್ಳಬೇಕು.
-ಬಿಲ್ವಪತ್ರೆಯ ರಸವನ್ನು ಪ್ರತಿದಿನ 2 – 3 ಚಮಚೆಯಷ್ಟು ಸೇವಿಸುತ್ತಿದ್ದರೆ ನಿಶ್ಯಕ್ತಿ ದೂರವಾಗುತ್ತದೆ.
-ಸ್ವಲ್ಪ ನೀರಿನಲ್ಲಿ ಬಿಲ್ವದ ಹೂಗಳನ್ನು ನೆನೆಸಿಟ್ಟು ನಂತರ ಶೋಧಿಸಿ ಆ ನೀರಿನಿಂದ ಕಣ್ಣುಗಳನ್ನು ತೊಳೆದುಕೊಳ್ಳುತ್ತಿದ್ದರೆ ಕಣ್ಣಿನ ಆರೋಗ್ಯ ಚೆನ್ನಾಗಿರುತ್ತದೆ.
-ಬಾಯಿಯಲ್ಲಿ ಹುಣ್ಣಾಗಿದ್ದಾಗ ಬಿಲ್ವಪತ್ರೆ ಹಣ್ಣಿನ ತಿರುಳಿಗೆ ಸ್ವಲ್ಪ ಬೆಲ್ಲ ಸೇರಿಸಿ ದಿನಕ್ಕೊಮ್ಮೆ ಸೇವಿಸಿ.
-ಅಜೀರ್ಣದಿಂದ ವಾಂತಿ ಆದಾಗ, ಎರಡು ಚಮಚೆ ಬಿಲ್ವಪತ್ರೆ ರಸಕ್ಕೆ ಒಂದು ಚಮಚ ಜೇನುತುಪ್ಪ ಸೇರಿಸಿ ದಿನದಲ್ಲಿ 2-3 ಬಾರಿ ಸೇವಿಸಬೇಕು.
-ಅಸ್ತಮಾ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಮುಂಜಾನೆ ಎದ್ದಕೂಡಲೇ ಒಂದು ಬಿಲ್ವದ ಎಲೆಯನ್ನು 2-3 ಕಾಳುಮೆಣಸಿನೊಂದಿಗೆ ಬಾಯಿಗೆ ಹಾಕಿಕೊಂಡು ಚೆನ್ನಾಗಿ ಅಗಿದು ತಿನ್ನಬೇಕು.
-ಬಿಲ್ವದ ಎಲೆಗಳನ್ನು ಒಣಗಿಸಿ ಚೂರ್ಣ ಮಾಡಿ, ಒಂದು ಚಮಚದಷ್ಟು ಚೂರ್ಣವನ್ನು ಒಂದು ಬಟ್ಟಲು ನೀರಿಗೆ ಸೇರಿಸಿ ಕುದಿಸಿ, ತಣಿಸಿ ದಿನದಲ್ಲಿ 2-3 ಬಾರಿ ಕುಡಿಯುತ್ತಿದ್ದರೆ ರಕ್ತದೊತ್ತಡ ಇರುವವರಿಗೆ ಪ್ರಯೋಜನವಾಗುತ್ತದೆ.
– ಭೇದಿ ಮುಂತಾದ ಹೊಟ್ಟೆಯ ಸಂಬಂಧಿ ಸಮಸ್ಯೆಗಳಿದ್ದಾಗ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಸ್ವಲ್ಪ ಬಿಲ್ವದ ಹಣ್ಣನ್ನು ದಾಲಿcನ್ನಿ ಪುಡಿಯೊಂದಿಗೆ ಕಲೆಸಿ ಸೇವಿಸಬೇಕು.
-ಸಮಪ್ರಮಾಣದ ಬಿಲ್ವದ ತಿರುಳು ಮತ್ತು ಎಳ್ಳನ್ನು ಅರೆದು ಸ್ವಲ್ಪ ಬೆಣ್ಣೆ ಮತ್ತು ತುಪ್ಪದಲ್ಲಿ ಸೇರಿಸಿ ಸೇವಿಸುತ್ತಿದ್ದರೆ, ಮಲಸಂಬಂಧಿ ಸಮಸ್ಯೆಗಳು ನಿವಾರಣೆಯಾಗುತ್ತವೆ.
-ಹಸಿವಾಗದೇ ಇರುವವರು ನಾಲ್ಕೈದು ಬಿಲ್ವ ಪತ್ರೆ ಎಲೆಯನ್ನು ಪ್ರತಿದಿನ ಮುಂಜಾನೆ ಚೆನ್ನಾಗಿ ಅಗಿದು ತಿನ್ನಬೇಕು.
* ವಿಜಯಕುಮಾರ್ ಎಸ್.ಅಂಟೀನ