Advertisement
ಇದು ಗದಗ- ಬೆಟಗೇರಿ ಅವಳಿ ನಗರದಲ್ಲಿ ಸಂಚಾರಿ ಪೊಲೀಸರು ಧ್ವನಿವರ್ದಕದ ಮೂಲಕ ಪರಿಷ್ಕೃತ ದಂಡದ ಮೊತ್ತವನ್ನು ಪ್ರಚಾರ ಪಡಿಸಿದ ಪರಿ ಇದು. ಇತ್ತೀಚೆಗೆ ಸುಪ್ರೀಂ ಕೋರ್ಟ್ ಆದೇಶದನ್ವಯ ಸಂಚಾರಿ ನಿಯಮಗಳ ಉಲ್ಲಂಘನೆಗೆ ದುಪ್ಪಟ್ಟು ಮೊತ್ತದ ದಂಡ ವಿಧಿಸಲಾಗುತ್ತದೆ ಎಂದು ಗುರುವಾರ ಮೈಕ್ ಮೂಲಕ ಡಂಗೂರ ಸಾರಲಾಯಿತು.
Related Articles
Advertisement
ಧ್ವನಿ ವರ್ಧಕ ಮೂಲಕ ಪ್ರಚಾರ: ಅವಳಿ ನಗರದ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿಯಂತ್ರಣ, ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುವು ಮಾಡುವ ನಿಟ್ಟಿನಲ್ಲಿ ಖಾಸಗಿ ವಾಹನಗಳಿಗೆ ಧ್ವನಿವರ್ಧಕಗಳನ್ನು ಅಳವಡಿಸಿಕೊಂಡು ಪ್ರಚಾರ ಮಾಡಿದರು. ಬೈಕ್ ಸವಾರರ ಹಿತದೃಷ್ಟಿಯಿಂದ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಬೈಕ್‌ಗಳಿಗೆ ವಿಮಾ ಮಾಡಿಸಬೇಕು. ಬೈಕ್ ಪರವಾನಗಿ ಪಡೆದುಕೊಂಡು ಬೈಕ್ ಓಡಿಸಬೇಕು. ಸಂಚಾರ ನಿಮಯ ಕಟ್ಟುನಿಟ್ಟಾಗಿ ಪಾಲಿಸಬೇಕು. ಈ ಕುರಿತು ಪ್ರಕ್ರಿಯಿಸಿರುವ ಟ್ರಾಫಿಕ್ಸ್ ಪಿಎಸ್‌ಐ ಕಮಲಾ ದೊಡ್ಡಮನಿ, ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಸಂಚಾರಿ ನಿಯಗಳ ಉಲ್ಲಂಘನೆಗೆ ದುಪ್ಪಟ್ಟು ದಂಡ ವಿಧಿಸಲಾಗುತ್ತದೆ ಎಂದು ಮೈಕ್ ಮೂಲಕ ಜನಜಾಗೃತಿ ನಡೆಸಲಾಗಿದೆ. ಇದೇ ವೇಳೆ ಸಂಚಾರಿ ನಿಯಮ ಉಲ್ಲಂಘಿಸಿ, ವಾಹನಗಳ ಸಂಚಾರಕ್ಕೆ ಅಡ್ಡಿಯಾಗುವಂತೆ ನಿಲ್ಲಿಸಲಾದ 25ಕ್ಕೂ ಹೆಚ್ಚು ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದರು.