ಗದಗ: ಸಚಿವ ನಾರಾಯಣಗೌಡ ಕಾಂಗ್ರೆಸ್‌ಗೆ ಹೋಗಬಹುದು. ಅದು ಅವರ ವೈಯಕ್ತಿಕ ವಿಚಾರ. ಆದರೆ, 17 ಜನ ಶಾಸಕರಲ್ಲಿ ಯಾರೂ ಮತ್ತೆ ಕಾಂಗ್ರೆಸ್‌ಗೆ ಹೋಗಲ್ಲ ಎನ್ನುವ ವಿಶ್ವಾಸವಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಹೋಗುವವರು ಹೋಗಲಿ. ಇಬ್ಬರು ಹೋದರೆ 20 ಜನ ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಲು ರೆಡಿ ಇದ್ದಾರೆ. ಕಾಂಗ್ರೆಸ್, ಜೆಡಿಎಸ್‌ನಿಂದಲೇ ಇನ್ನೂ ಬಹಳ ಜನ ಬರುವವರಿದ್ದಾರೆ. ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ರಕ್ಷಣೆ ಮಾಡಲಾಗುತ್ತಿದೆ ಎಂಬ ಕಾಂಗ್ರೆಸ್ ಆರೋಪ ಸುಳ್ಳು. ನಾವು ಲೋಕಾಯುಕ್ತ ಸಂಸ್ಥೆಯಿಂದ ಅವರಿಗೆ ರಕ್ಷಣೆ ಕೊಡಬಹುದಾಗಿತ್ತು. ಆದರೆ, ಹಾಗೆ ಮಾಡಲಿಲ್ಲ. ಲೋಕಾಯುಕ್ತ ಸಂಸ್ಥೆ ನಿಷ್ಪಕ್ಷಪಾತ ತನಿಖೆ ಮಾಡುತ್ತಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು.
ತನಿಖೆಯಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಇಲ್ಲ. ಸಿಎಂ ರಾಜೀನಾಮೆ ಕೇಳುವುದು ಹಾಸ್ಯಾಸ್ಪದ. ನೆಗಡಿಯಾದ್ರೆ ಮೂಗು ಕೊಯ್ದುಕೊಳ್ಳಲು ಸಾಧ್ಯವೇ? ಸಿಎಂ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರಿಗೆ ಮಾಡಲು ಬೇರೆ ಕೆಲಸವಿಲ್ಲ. ಅದಕ್ಕಾಗಿ ಬಂದ್ ಮಾಡುತ್ತಿದ್ದಾರೆ. ಆ ಗ್ಯಾರಂಟಿ, ಈ ಗ್ಯಾರಂಟಿ ಎಂದು ಸುಳ್ಳು ಆಶ್ವಾಸನೆ ಕೊಡುತ್ತಿದ್ದಾರೆ. ಆದರೆ, ಕಾಂಗ್ರೆಸ್ ಅ ಧಿಕಾರಕ್ಕೆ ಬರುವುದೇ ಗ್ಯಾರಂಟಿ ಇಲ್ಲ ಎಂದರು.