Advertisement
ಮೇಲ್ಮನೆಯಲ್ಲಿ ಕಾಂಗ್ರೆಸ್ ಸದಸ್ಯ ಪಿ.ಆರ್.ರಮೇಶ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಸ್ ಚಾಲನೆ ವೇಳೆ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಆದರೂ ಯಾರಿಗೂ ಕ್ಯಾರೆ ಎನ್ನದೇ ಮೊಬೈಲ್ ಬಳಸುವುದು ಸಾಮಾನ್ಯವಾಗಿದೆ. ಈ ಬಗ್ಗೆ ಸಾರ್ವಜನಿಕರು, ಪ್ರಯಾಣಿಕರಿಂದ ಸಾರಿಗೆ ಇಲಾಖೆಗೆ ದೂರು ಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಸರಕಾರಿ, ಖಾಸಗಿ ಎನ್ನದೇ ಎಲ್ಲ ಚಾಲಕರ ವಿರುದ್ಧ ಶಿಸ್ತು ಕ್ರಮ ಜರಗಿಸಿ, ಕೇಸು ದಾಖಲಿಸಲು ಸಾರಿಗೆ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.
ಬೆಂಗಳೂರು ನಗರದಲ್ಲಿ ಬಸ್‌ಗಳಿಂದ ಆಗುವ ಮಾಲಿನ್ಯ ತಡೆಗೆ ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಹೊಸ 1200 ಬಿಎಸ್-6 ಬಸ್‌ಗಳಿಗೆ ಕಾರ್ಯಾದೇಶ ನೀಡಲಾಗಿದೆ. ಎ. 1ರಿಂದ ಕೆಲವು ಬಸ್‌ಗಳು ರಸ್ತೆಗೆ ಇಳಿಯಲಿದೆ. ಅಲ್ಲದೆ ಖಾಸಗಿ ಗುತ್ತಿಗೆ ಆಧಾರದಲ್ಲಿ 400 ಎಲೆಕ್ಟ್ರಾನಿಕ್ ಬಸ್ ಖರೀದಿಗೆ ಟೆಂಡರ್ ಪ್ರಕ್ರಿಯೆ ಆರಂಭಿಸಿದ್ದೇವೆ. ಇದಕ್ಕಾಗಿ 100 ಕಡೆ ಚಾರ್ಜರ್ ಪಾಯಿಂಟ್ ಕೂಡ ತೆರೆಯಲಿದ್ದೇವೆ ಎಂದರು.