Advertisement
ಕಳೆದ ನಾಲ್ಕು ದಶಕಗಳಿಂದ ಹಳ್ಳಿಗಳಲ್ಲಿ ಸೈಕಲ್ ತುಳಿದು ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಸಾಮಾಜಿಕ ಕಾರ್ಯಕರ್ತ ಬೆಳಗಾವಿ ಜಿಲ್ಲೆ ಕಟ್ಟಣಬಾವಿಯ ಶಿವಾಜಿ ಛತ್ರೆಪ್ಪ ಕಾಗಣೇಕರ ಅವರ ಬೇಸರದ ನುಡಿಗಳಿವು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 2018-19ನೇ ಸಾಲಿನ “ಡಿ. ದೇವರಾಜ ಅರಸು ರಾಜ್ಯಮಟ್ಟದ ಪ್ರಶಸ್ತಿ’ ಸ್ವೀಕರಿಸಿ ಅವರು ಮಾತನಾಡಿದರು.
Related Articles
Advertisement
ಈ ನಿಟ್ಟಿನಲ್ಲಿ ಬಿಎಸ್ಸಿ ಪೂರೈಸಿ, ಹಳ್ಳಿಗೆ ಹೋಗಿ ನೂರಾರು ಮಹಿಳೆಯರ ಬದುಕು ಹಸನುಗೊಳಿಸುವಲ್ಲಿ ನಿರತರಾದ ಶಿವಾಜಿ ಕಾಗಣೇಕರ ಎಲ್ಲರಿಗೂ ಮಾದರಿ ಆಗಿದ್ದಾರೆ. ಸರ್ಕಾರ ಮಾಡಬೇಕಾದ ಕೆಲಸವನ್ನು ಶಿವಾಜಿ ಒಬ್ಬ ವ್ಯಕ್ತಿಯಾಗಿ ಮತ್ತು ಶಕ್ತಿಯಾಗಿ ಮಾಡಿದ್ದಾರೆ. ಆ ಮೂಲಕ ಸರ್ಕಾರ ಮತ್ತು ಸಮಾಜಕ್ಕೆ ದಾರಿದೀಪವಾಗಿದ್ದಾರೆ.
ಅಂತಹವರಿಗೆ ಪ್ರಶಸ್ತಿ ಪ್ರದಾನ ಮಾಡುವ ಮೂಲಕ ಡಿ. ದೇವರಾಜ ಅರಸು ಅವರಿಗೆ ನಿಜವಾದ ಗೌರವ ಸಲ್ಲಿಸಿದಂತಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷ ಪ್ರೊ.ಬರಗೂರು ರಾಮಚಂದ್ರಪ್ಪ ಮಾತನಾಡಿ, ಕೇವಲ 13 ನಿಮಿಷದಲ್ಲಿ ಸಮಿತಿಯು ಸರ್ವಾನುಮತದಿಂದ ಶಿವಾಜಿ ಕಾಗಣೇಕರ ಅವರನ್ನು ಆಯ್ಕೆ ಮಾಡಿತು. ಅವರು ಸ್ವಂತ ಮನೆ ಹೊಂದಿಲ್ಲ, ವಾಹನ ಇಲ್ಲ.
ಫೋನ್ ಅಂತೂ ಇಲ್ಲವೇ ಇಲ್ಲ. ಸಾಮಾಜಿಕ ಕ್ರಿಯಾಶೀಲ ವ್ಯಕ್ತಿಯಾಗಿದ್ದು, ಸರ್ಕಾರದ ಅನೇಕ ಯೋಜನೆಗಳನ್ನು ಸಾಕಾರಗೊಳಿಸುವಲ್ಲಿ ಎಲೆಮರೆಯ ಕಾಯಿಯಂತೆ ಕೆಲಸ ಮಾಡುತ್ತಿದ್ದಾರೆ ಎಂದರು. ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ, ಸಚಿವರಾದ ವೆಂಕಟರಮಣಪ್ಪ, ಎಚ್.ಡಿ. ರೇವಣ್ಣ, ಪುಟ್ಟರಂಗಶೆಟ್ಟಿ, ಸಾ.ರಾ. ಮಹೇಶ್, ಮಾಜಿ ಸಚಿವ ಆರ್. ರೋಷನ್ ಬೇಗ್ ಮತ್ತಿತರರು ಉಪಸ್ಥಿತರಿದ್ದರು.