Advertisement

ಮಹಿಳಾ ಸ್ವಾವಲಂಬಿಯಾದರೆ ದೇಶ ಸದೃಢ: ನರಸಪ್ಪ

03:30 PM Jan 21, 2022 | Team Udayavani |

ಲಿಂಗಸುಗೂರು: ಮಹಿಳೆಯರು ಸ್ವಾವಲಂಬಿಯಾದರೆ ದೇಶವೂ ಸ್ವಾವಲಂಬಿಯಾದಂತೆ ಎಂದು ಪುರಸಭೆ ಮುಖ್ಯಾಧಿಕಾರಿ ನರಸಪ್ಪ ತಹಶೀಲ್ದಾರ ಹೇಳಿದರು.

Advertisement

ಪಟ್ಟಣದ ಐಎಂಎ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಡೇ ನಲ್ಮ ಯೋಜನೆಯಡಿ ಮಹಿಳೆಯರಿಗಾಗಿ ವಿವಿಧ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಮಹಿಳೆ ತನ್ನ ಕುಟುಂಬ ಸಮರ್ಥವಾಗಿ ನಿರ್ವಹಣೆ ಮಾಡಿದರೆ ಗ್ರಾಮ, ದೇಶ ಸಮೃದ್ಧಿಯಾಗಿ ಬೆಳೆಯಲು ಸಾಧ್ಯವಾಗುತ್ತಿದೆ. ಸ್ವಸಹಾಯ ಸಂಘಗಳಲ್ಲಿ ಹಣ ಕೂಡಿಟ್ಟು ಅದರಿಂದ ಬರುವ ಲಾಭದಿಂದ ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು. ಈ ಹಿನ್ನೆಲೆಯಲ್ಲಿ ಮಹಿಳೆಯರಿಗಾಗಿ ಸಾಮರ್ಥ್ಯದ ಬಗ್ಗೆ ತರಬೇತಿ ನೀಡಲಾಗುತ್ತಿದೆ ಎಂದರು.

ಪುರಸಭೆ ಅಧ್ಯಕ್ಷೆ ಸುನೀತಾ ಕೆಂಭಾವಿ ಕಾರ್ಯಾಗಾರ ಉದ್ಘಾಟಿಸಿದರು. ಈ ವೇಳೆ ಪುರಸಭೆ ಉಪಾಧ್ಯಕ್ಷ ಮಹ್ಮದ್‌ ರಫಿ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಮೋದ ಕುಲಕರ್ಣಿ, ಸಮುದಾಯ ಸಂಘಟನಾ ಅಧಿಕಾರಿ ರಾಜಶೇಖರ್‌, ಆರೋಗ್ಯ ಶಿಕ್ಷಣಾಧಿಕಾರಿ ಪ್ರಾಣೇಶ ಜೋಶಿ ಸೇರಿದಂತೆ ಇತರರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next