Advertisement

ಬೆಂಗಳೂರಿನಿಂದ ಬಂದರೆ ಹೋಮ್ ಕ್ವಾರಂಟೈನ್ ನಲ್ಲಿ ಇರಬೇಕು: ಉಡುಪಿ ಜಿಲ್ಲಾಡಳಿತ ಮನವಿ

03:29 PM Jul 12, 2020 | keerthan |

ಕುಂದಾಪುರ: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಒಂದು ವಾರ ಲಾಕ್ ಡೌನ್ ವಿಧಿಸಿರುವ ಕಾರಣ ಆ ಜಿಲ್ಲೆಗಳಿಂದ ಇನ್ನೆರಡು ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಗೆ ಜನರು ಬರುವ ನಿರೀಕ್ಷೆಯಿದೆ. ಬೆಂಗಳೂರಿನಿಂದ ಬಂದವರು ಸ್ವಯಂ ಪ್ರೇರಿತರಾಗಿ ಮನೆಯಲ್ಲಿ ಕ್ವಾರಂಟೈನ್ ಆಗಬೇಕು ಎಂದು ಉಡುಪಿ ಜಿಲ್ಲಾಡಳಿತ ಮನವಿ ಮಾಡಿದೆ.

Advertisement

ಕುಂದಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರು, ಅಂಗನವಾಡಿ ಕಾರ್ಯಕರ್ತರನ್ನು ಬಳಸಿ ಮನೆ ಮನೆ ಸರ್ವೇ ಮಾಡಲಾಗುವುದು. ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಿಂದ ಬಂದ ಜನರು, ಸಾರಿ, ಐಎಲ್ ಐ ಪ್ರಕರಣಗಳ ಬಗ್ಗೆ ಮಾಹಿತಿ ಪಡೆಯಲಾಗುವುದು ಎಂದರು.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೂ ರೋಗಲಕ್ಷಣ ಇರುವ ಪ್ರಕರಣಗಳ ಸಂಖ್ಯೆ ಕಡಿಮೆ ಇದೆ. ಅಗತ್ಯ ಬಿದ್ದರೆ ಹಾಸ್ಟೆಲ್ ಗಳನ್ನೂ ಕೋವಿಡ್ ಕೇರ್ ಸೆಂಟರ್ ಗಳಾಗಿ ಪರಿವರ್ತನೆ ಮಾಡಿಕೊಳ್ಳುವ ಚಿಂತನೆಯಿದೆ. ಕೊಲ್ಲೂರು ಲಲಿತಾಂಬಿಕಾ ಗೆಸ್ಟ್ ಹೌಸ್ ಕೋವಿಡ್ ಆಸ್ಪತ್ರೆಯಾಗಿ ಪುನಾರಂಭ ಮಾಡಲಿದ್ದೇವೆ ಎಂದರು.

ಹೋಮ್ ಐಸೋಲೇಶನ್ ಬಗ್ಗೆಯೂ ಚಿಂತನೆಯಿದ್ದು, ಸೋಂಕು ಲಕ್ಷಣ ಇರದ ರೋಗಿಗಳ ಮನೆಯಲ್ಲಿ ಸೂಕ್ತ ವ್ಯವಸ್ಥೆ ಇದ್ದರೆ ಹೋಮ್ ಐಸೋಲೇಶನ್ ಮಾಡುವ ಕುರಿತು ಯೋಚಿಸುತ್ತಿದ್ದೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next