Advertisement

ಅಗತ್ಯ ಬಿದ್ದರೆ ಗುಂಡುಹಾರಿಸಿ ಪೊಲೀಸರಿಗೆ ಐಜಿಪಿ ಸೂಚನೆ

03:45 AM Jul 10, 2017 | Team Udayavani |

ಮಂಗಳೂರು: ಪೊಲೀಸರು ಇಲ್ಲವೇ ನಾಗರಿಕರ ಮೇಲೆ ಹಲ್ಲೆಗೆ ಮುಂದಾದರೆ ಅಂತಹ ಸಮಾಜಘಾತಕ ಶಕ್ತಿಗಳ ವಿರುದ್ಧ ಅಗತ್ಯ ಬಿದ್ದರೆ ಕಾನೂನಿನ ವ್ಯಾಪ್ತಿಯಲ್ಲಿ ಗುಂಡು ಹಾರಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಂತೆ ಪಶ್ಚಿಮ ವಲಯ ಐಜಿಪಿ ಹರಿಶೇಖರನ್‌ ಸೂಚನೆ ನೀಡಿ¨ªಾರೆ.

Advertisement

ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹಿಂದೆ ಮುಂದೆ ನೋಡಬಾರದು. ಕಾನೂನು ಕೈಗೆತ್ತಿಕೊಂಡವರು ಯಾರೇ ಇರಲಿ. ಅಂತಹವರ ವಿರುದ್ಧ ಕಾನೂನಿನಡಿಯಲ್ಲೆ ಕ್ರಮ ಜರಗಿಸಿ ಎಂದು ಪೊಲೀಸರಿಗೆ ಆದೇಶಿಸಿ¨ªಾರೆ.

ಶಾಂತಿ ನೆಲೆಸುವುದು ಮುಖ್ಯ
“ನಮಗೆ ಜಿಲ್ಲೆಯಲ್ಲಿ ಶಾಂತಿ ನೆಲೆಸುವುದು ಮುಖ್ಯ. ಕಳೆದೆರಡು ದಿನಗಳಿಂದ ನಿರಂತರವಾಗಿ ಸಭೆಗಳನ್ನು ನಡೆಸಲಾಗಿದೆ. ಜಿಲ್ಲೆಯಲ್ಲಿ ಏಳು ಕಡೆ ಚೆಕ್‌ ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ. ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬಾರದು’ ಎಂದು ಹರಿಶೇಖರನ್‌ ಮನವಿ ಮಾಡಿದರು.

ಜೈಲಿಗಟ್ಟುವೆವು: ಎಸ್‌ಪಿಸಮಾಜಘಾತುಕ ಶಕ್ತಿಗಳು ಕೂಡಲೇ ತಮ್ಮ ಅಟಾಟೋಪಗಳನ್ನು ನಿಲ್ಲಿಸದಿದ್ದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರಗಿಸಿ ಜೈಲಿಗಟ್ಟಲಾಗುವುದು ಎಂದು ಜಿÇÉಾ ಪೊಲೀಸ್‌ ವರಿಷ್ಠಾಧಿಕಾರಿ ಸುಧೀರ್‌ ಕುಮಾರ್‌ ರೆಡ್ಡಿ ತಿಳಿಸಿ¨ªಾರೆ.

“ಪರಿಸ್ಥಿತಿಯನ್ನು ನಿಯಂತ್ರಿಸಲು ನಾವು ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ. ಕೆಲವು ದುಷ್ಟಶಕ್ತಿಗಳು ಪರಿಸ್ಥಿತಿಯ ದುರ್ಲಾಭ ಪಡೆಯಲು ಯತ್ನಿಸುತ್ತಿವೆ. ಇನ್ನು ಮುಂದೆ ಯಾರಾದರೂ ಗಲಭೆ ನಡೆಸಲು ಮುಂದಾದರೆ ಜೈಲಿಗೆ ಹೋಗಲು ಸಿದ್ಧರಾಗಿರಿ’ ಎಂಬ ಕಠಿನ ಸಂದೇಶವನ್ನು ರವಾನಿಸಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಜಿಲ್ಲೆಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮುಂಜಾಗ್ರತಾ ಕ್ರಮವಾಗಿ ಬಂಟ್ವಾಳ ಮತ್ತು ಬಿ.ಸಿ.ರೋಡ್‌ ಸೇರಿದಂತೆ ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಶನಿವಾರಕ್ಕೆ ಹೋಲಿಸಿದರೆ ಇಂದು ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿಯತ್ತ ಮರಳುತ್ತಿದೆ ಎಂದು ವಿವರಿಸಿದರು.

ಆಯಕಟ್ಟಿನ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಸಾರ್ವ ಜನಿಕರು ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ
ಮಾಡಿದ ಅವರು, ವದಂತಿ ಹಬ್ಬಿಸುವವರ ವಿರುದ್ಧವೂ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಬಂಟ್ವಾಳ, ಬಿ.ಸಿ. ರೋಡ್‌, ಕೈಕಂಬ ಹಾಗೂ ಸುತ್ತಮುತ್ತ ನಿಷೇಧಾಜ್ಞೆ ಮುಂದುವರಿದಿದೆ. ಬಂಟ್ವಾಳ ತಾಲೂಕಿನಾದ್ಯಂತ ನಾಕಾಬಂದಿ ಏರ್ಪಡಿಸಿದ್ದು, ತಾಲೂಕಿನ ಒಳಬರುವ ಮತ್ತು ಒಳಹೋಗುವ ಎಲ್ಲ ವಾಹನಗಳನ್ನು ತಪಾಸಣೆ ಮಾಡಿ ಬಿಡಲಾಗುತ್ತಿದೆ ಎಂದರು.

ಅಪರಿಚಿತ ವಾಹನಗಳಲ್ಲಿ ಕೆಲವರು ಶಸ್ತ್ರಾಸ್ತ್ರಗಳನ್ನು ತುಂಬಿಕೊಂಡು ಬಂಟ್ವಾಳ ತಾಲೂಕನ್ನು ಪ್ರವೇಶಿಸುತ್ತಿ¨ªಾರೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ನಾಕಾಬಂದಿ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲೆಯನ್ನು ಪ್ರವೇಶಿಸುವ ಹಾಗೂ ಹೊರ
ಹೋಗುವ ವಾಹನಗಳನ್ನು ಬಿಗಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಭದ್ರತೆಗಾಗಿ 1,300ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಅಗತ್ಯ ಬಿದ್ದರೆ ಇನ್ನು ಹೊರ ಜಿಲ್ಲೆಗಳಿಂದ ಪಡೆಗಳನ್ನು ಕರೆಸಿಕೊಳ್ಳಲಾಗುವುದು. ಜಿಲ್ಲೆ ಸಹಜ ಸ್ಥಿತಿಗೆ ಮರಳುವವರೆಗೂ ಭದ್ರತಾ ಪಡೆ ಮೊಕ್ಕಾಂ ಹೂಡಲಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next