ಮಡಿಕೇರಿ: ದಕ್ಷಿಣ ವಲಯ ಪೊಲೀಸ್ ಮಹಾ ನಿರೀಕ್ಷಕ ಪ್ರವೀಣ್ ಮಧುಕರ್ ಪವಾರ್ ಅವರು ಕುಶಾಲನಗರಕ್ಕೆ ಭೇಟಿ ನೀಡಿ ಚುನಾವಣೆ ಸಂದರ್ಭದ ಭದ್ರತ ವ್ಯವಸ್ಥೆಗಳ ಬಗ್ಗೆ ಸೋಮವಾರ ಪೇಟೆ ಉಪವಿಭಾಗದ ಪೊಲೀಸ್ ಅಧಿಕಾರಿಗಳ ಜತೆಗೆ ಚರ್ಚಿಸಿದರು. ಕುಶಾಲನಗರ ಡಿವೈಎಸ್‌ಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದರು.
Advertisement
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಸೋಮವಾರ ಪೇಟೆ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕ ಆರ್.ವಿ. ಗಂಗಾಧರಪ್ಪ, ಶನಿವಾರಸಂತೆ ಸೋಮವಾರಪೇಟೆ, ಕುಶಾಲನಗರ, ಸುಂಟಿಕೊಪ್ಪ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಕುಶಾಲನಗರಕ್ಕೆ ಆಗಮಿಸಿದ ಐಜಿಪಿ ಅವರಿಗೆ ಇದೇ ಸಂದರ್ಭ ಗೌರವ ರಕ್ಷೆ ನೀಡಲಾಯಿತು.