Advertisement

ಐಐಎಸ್ಸಿ ವಿದ್ಯಾರ್ಥಿ ನೇಣಿಗೆ ಶರಣು

12:23 AM May 02, 2019 | Lakshmi GovindaRaj |

ಬೆಂಗಳೂರು: ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ)ಯಲ್ಲಿ ಪಿಎಚ್‌ಡಿ ವ್ಯಾಸಾಂಗ ಮಾಡುತ್ತಿದ್ದ ನಾಗಪುರ ಮೂಲದ ವಿದ್ಯಾರ್ಥಿ, ಹಾಸ್ಟೆಲ್‌ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

Advertisement

ಅಮ್ಯಾ ಮನೋಜ್‌ ಚುಟೆ ಆತ್ಮಹತ್ಯೆ ಮಾಡಿಕೊಂಡವರು. ಎಂಟೆಕ್‌ ಪೂರ್ಣಗೊಳಿಸಿದ್ದ ಮನೋಜ್‌, ಐಐಎಸ್ಸಿಯಲ್ಲಿ ಕಂಪ್ಯೂಟರ್‌ ಸೈನ್ಸ್‌ ಹಾಗೂ ಅಟೋಮೇಶನ್‌ ವಿಭಾಗದಲ್ಲಿ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿಯಾಗಿದ್ದು, ಸಂಸ್ಥೆಯ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದರು.

ಮಂಗಳವಾರ ರಾತ್ರಿ 12.25ರ ಸುಮಾರಿಗೆ ತನ್ನ ಹಾಸ್ಟೆಲ್‌ ಕೊಠಡಿಯಲ್ಲಿ ನೇಣುಬಿಗಿದುಕೊಂಡಿದ್ದಾರೆ. ಇದನ್ನು ಗಮನಿಸಿದ ಸ್ನೇಹಿತರು, ಹಾಸ್ಟೆಲ್‌ ಆಡಳಿತ ಮಂಡಳಿಗೆ ವಿಷಯ ತಿಳಿಸಿದ್ದಾರೆ.

ವಿಷಯ ತಿಳಿದ ಕೂಡಲೇ ಸದಾಶಿವನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ ಯಾವುದೇ ಡೆತ್‌ನೋಟ್‌ ಪತ್ತೆಯಾಗಿಲ್ಲ. ಮಾನಸಿಕ ಖನ್ನತೆಯಿಂದ ಬಳಲುತ್ತಿದ್ದ ಮನೋಜ್‌, ಸೋಮವಾರ 8 ಗಂಟೆ ಸುಮಾರಿಗೆ ತನ್ನ ತಾಯಿಗೆ ಕರೆ ಮಾಡಿ 30 ನಿಮಿಷ ಮಾತನಾಡಿದ್ದಾರೆ. ಮತ್ತೆ ಕರೆ ಮಾಡಿಲ್ಲ ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.

Advertisement

ಮನೋಜ್‌, ಈ ಹಿಂದೆ ನಿಮ್ಹಾನ್ಸ್‌ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಸಂಸ್ಥೆಯಲ್ಲಿರುವ ಆರೋಗ್ಯ ಕೇಂದ್ರದಲ್ಲಿಯೂ ಆಗಾಗ ಚಿಕಿತ್ಸೆ ಪಡೆಯುತ್ತಿದ್ದ ಎಂದು ಅವರ ಪೋಷಕರು ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next