ಮುಂಬಯಿ : ಐಐಟಿ ಬಾಂಬೆಯ 26 ವರ್ಷದ ವಿದ್ಯಾರ್ಥಿ ಸೋಮವಾರ ಮುಂಜಾನೆ ಇಲ್ಲಿನ ಪೊವೈ ಕ್ಯಾಂಪಸ್‌ನಲ್ಲಿರುವ ಹಾಸ್ಟೆಲ್‌ನ ಟೆರೇಸ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮೃತ ವಿದ್ಯಾರ್ಥಿಯನ್ನು ದರ್ಶನ್ ಮಾಳವಿಯಾ ಎಂದು ಗುರುತಿಸಲಾಗಿದ್ದು, ತನ್ನ ಹಾಸ್ಟೆಲ್ ಕೊಠಡಿಯಲ್ಲಿನ ಬೋರ್ಡ್‌ನಲ್ಲಿ ತನ್ನ ಸಾವಿಗೆ ಯಾರೂ ಹೊಣೆಗಾರರಾಗಬಾರದು ಎಂದು ಸಂದೇಶವನ್ನು ಬರೆದಿಡಲಾಗಿದೆ ಎಂದು ಪೊವೈ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಾಳವಿಯಾ ಅವರ ದೇಹವನ್ನು ಏಳು ಅಂತಸ್ತಿನ ಹಾಸ್ಟೆಲ್ ಕಟ್ಟಡದ ಹೊರಗೆ ಕಾವಲುಗಾರ ಗಮನಿಸಿ ಸಂಸ್ಥೆಯ ಅಧಿಕಾರಿಯನ್ನು ಕರೆದು ಬಳಿಕ ನಂತರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಮೇಲ್ನೋಟಕ್ಕೆ ಮೃತ ವಿದ್ಯಾರ್ಥಿ ಖಿನ್ನತೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಾಳವಿಯಾ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾಖಲು ಮಾಡುವ ಮೊದಲು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು. ಮಧ್ಯಪ್ರದೇಶ ಮೂಲದ ಮೃತ ವಿದ್ಯಾರ್ಥಿ ಕಳೆದ ಜುಲೈನಿಂದ ಪ್ರತಿಷ್ಠಿತ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಸ್ನಾತಕೋತ್ತರ ಕೋರ್ಸ್ ಓದುತ್ತಿದ್ದರು.ಸಾವಿನ ಬಗ್ಗೆ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ,ವಿದ್ಯಾರ್ಥಿಯು ತನ್ನ ಹಾಸ್ಟೆಲ್ ಕೊಠಡಿಯಲ್ಲಿನ ಬೋರ್ಡ್‌ನಲ್ಲಿ ತಾನು ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿರುವುದಾಗಿ ಸಂದೇಶವನ್ನು ಬರೆದಿದ್ದನು. ಹೆಚ್ಚಿನ ತನಿಖೆ ನಡೆಯುತ್ತಿದೆ,ಎಂದು ಎಂದು ಪೊವೈ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಬುಧನ್ ಸಾವಂತ್ ತಿಳಿಸಿದ್ದಾರೆ.