Advertisement

ಧಾರವಾಡ ಐಐಟಿ: ಮತ್ತೆ ಮೀಸಲಾತಿಗೆ ಒತ್ತಾಯ

03:45 AM Feb 09, 2017 | Team Udayavani |

ವಿಧಾನಸಭೆ: ಧಾರವಾಡದ ಭಾರತೀಯ ತಂತ್ರಜ್ಞಾನ (ಐಐಟಿ)ಯಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಶೇ.25 ರಷ್ಟು ಮೀಸಲಾತಿ ಕಲ್ಪಿಸುವಂತೆ ಕೇಂದ್ರಕ್ಕೆ ಪುನರ್‌ ಮನವಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ.

Advertisement

ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‌ನ ಗೋಪಾಲಯ್ಯ ಪ್ರಶ್ನೆಗೆ ಉತ್ತರಿಸಿದ ಅವರು,  ಈ ಹಿಂದೆ ಕೇಂದ್ರ ಸರ್ಕಾರಕ್ಕೆ  ಈ ಕುರಿತು ಮನವಿ ಸಲ್ಲಿಸಿತ್ತು. ಆದರೆ, ನಮ್ಮ ಮನವಿ ಪರಿಗಣಿಸಲಿಲ್ಲ. ಮತ್ತೂಮ್ಮೆ ಮನವಿ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಐಐಟಿಯಲ್ಲಿ ಪ್ರಸ್ತುತ ಮೂರು ಕೋರ್ಸ್‌ ನಡೆಸುತ್ತಿದ್ದು ಪ್ರತಿ ಕೋರ್ಸ್‌ನಲ್ಲಿ 40 ವಿದ್ಯಾರ್ಥಿಗಳಿಗೆ ಪ್ರವೇಶ ಅವಕಾಶ ಇದೆ. 2016-17 ನೇ ಸಾಲಿನಿಂದಲೇ ತರಗತಿ ಪ್ರಾರಂಭಿಸಲಾಗಿದೆ ಎಂದು ಅವರು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next