ಬೆಂಗಳೂರು: “ಈ ಯಡಿಯೂರಪ್ಪನ ಮೇಲೆ ಹೈಕಮಾಂಡ್ ವಿಶ್ವಾಸವಿಟ್ಟಿದೆ. ಎಷ್ಟು ದಿನ ವಿಶ್ವಾಸ ಇಟ್ಟು ಮುಂದುವರೆಯಿರಿ ಎನ್ನುತ್ತಾರೋ, ಅಲ್ಲಿಯವರೆಗೂ ಇರುತ್ತೇನೆ. ಯಾವಾಗ ರಾಜೀನಾಮೆ ಕೊಡಿ ಎನ್ನುತ್ತಾರೋ ಆಗ ರಾಜೀನಾಮೆ ಕೊಟ್ಟು ಹೋಗುತ್ತೇನೆ”. ಇದು ನಾಯಕತ್ವ ಬದಲಾವಣೆ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿದ ಪ್ರತಿಕ್ರಿಯೆ.
ಮಾಜಿ ಮುಖ್ಯಮಂತ್ರಿ, ದಿವಂಗತ ಡಿ.ದೇವರಾಜ ಅರಸು ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅರಸು ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಇದನ್ನೂ ಓದಿ:ವರ್ಗಾವಣೆ ಬೆನ್ನಲ್ಲೇ ಸಿಎಂ ಭೇಟಿಗೆ ದೌಡಾಯಿಸಿದ ರೋಹಿಣಿ ಸಿಂಧೂರಿ
ರಾಜ್ಯದಲ್ಲಿ ಪರ್ಯಾಯ ನಾಯಕ ಇಲ್ಲವೆಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಬಿ.ಎಸ್ ಯಡಿಯೂರಪ್ಪ, ಪರ್ಯಾಯ ನಾಯಕತ್ವ ಇಲ್ಲ ಎನ್ನುವುದನ್ನು ನಾನು ಒಪ್ಪುವುದಿಲ್ಲ. ದೇಶದಲ್ಲಿ ಪರ್ಯಾಯ ನಾಯಕರು ಇದ್ದೇ ಇದ್ದಾರೆ. ಆಯಾಯ ಕಾಲಕ್ಕೆ ತಕ್ಕಂತೆ ಪರ್ಯಾಯ ನಾಯಕರು ಸಿಗುತ್ತಾರೆ. ರಾಜ್ಯದಲ್ಲೂ ಪರ್ಯಾಯ ನಾಯಕರು ಇಲ್ಲ ಎಂದೇನಿಲ್ಲ, ಇದನ್ನ ನಾನು ಒಪ್ಪುವುದಿಲ್ಲ ಎಂದರು.
ಈ ವೇಳೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.