Advertisement
ಜ. 6 ರಂದು ಮರೀನ್‌ಲೈನ್ಸ್‌ನ ಯುನಿವರ್ಸಿಟಿ ಗ್ರೌಂಡ್‌ನಲ್ಲಿ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಯುವಾಭ್ಯುದಯ ಸಮಿತಿಯ ಆಶ್ರಯದಲ್ಲಿ ಜರಗಿದ ಕೋಟಿ-ಚೆನ್ನಯ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಅವರು, ಯಾವುದೇ ಸ್ಪರ್ಧೆ ಎಂದಾಗ ಅಲ್ಲಿ ಸೋಲು-ಗೆಲುವು ಸಾಮಾನ್ಯ. ಸೋತವರು ನಿರಾಶರಾಗದೆ ಮತ್ತೆ ಪ್ರಯತ್ನಿಸಬೇಕು. ಇಂದಿನ ಕ್ರೀಡೋತ್ಸವದಲ್ಲಿ ವಿಜೇತರಾದ ಕ್ರೀಡಾಳುಗಳಿಗೆ ಉತ್ತಮ ಭವಿಷ್ಯವಿದೆ. ಅವರೆಲ್ಲರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯುವಂತಾಗಲಿ ಎಂದು ಹಾರೈಸಿದರು.
ಅತಿಥಿಗಳಾಗಿ ಆಗಮಿಸಿದ ಜಯಲಕ್ಷಿ¾ ಕೋ. ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಕಾರ್ಯಾಧ್ಯಕ್ಷ ರಂಗಪ್ಪ ಸಿ. ಗೌಡ, ಪತ್ರಕರ್ತ ಚಂದ್ರಶೇಖರ ಪಾಲೆತ್ತಾಡಿ, ಭಾರತ್ ಬ್ಯಾಂಕಿನ ನಿರ್ದೇಶಕ ಗಂಗಾಧರ್ ಜೆ. ಪೂಜಾರಿ, ವಾಸ್ತುತಜ್ಞ-ಪುರೋಹಿತ ಡಾ| ಎಂ. ಜೆ. ಪ್ರವೀಣ್ ಭಟ್ ಸಯಾನ್ ಅವರು ಮಾತನಾಡಿ ಶುಭಹಾರೈಸಿದರು.
ಅಸೋಸಿಯೇಶನ್‌ನ ಉಪಾಧ್ಯಕ್ಷ ರಾದ ಶಂಕರ ಡಿ. ಪೂಜಾರಿ, ಹರೀಶ್ ಜಿ. ಅಮಿನ್, ದಯಾನಂದ್ ಆರ್. ಪೂಜಾರಿ, ಶ್ರೀನಿವಾಸ ಆರ್. ಕರ್ಕೇರ, ಗೌರವ ಪ್ರಧಾನ ಕೋಶಾಧಿಕಾರಿ ರಾಜೇಶ್ ಜೆ. ಬಂಗೇರ, ಸಾಂಸ್ಕೃತಿಕ ಸಮಿತಿಯ ಕಾರ್ಯದರ್ಶಿ ಅಶೋಕ್ ಕುಕ್ಯಾನ್ ಸಸಿಹಿತ್ಲು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿಜೇತ ಸ್ಪರ್ಧಿಗಳಿಗೆ ಗಣ್ಯರು ಬಹುಮಾನ ವಿತರಿಸಿ ಶುಭಹಾರೈಸಿದರು. ಕ್ರೀಡೋತ್ಸವದ ಪ್ರೋತ್ಸಾಹಕರು, ಪ್ರಾಯೋಜಕರು, ಕ್ರೀಡಾ ಸಂಘಟಕರು, ತೀರ್ಪುಗಾರರನ್ನು ಅಸೋಸಿಯೇಶನ್‌ನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಗೌರವಿಸಿದರು. ಅಂತರಾಷ್ಟ್ರೀಯ ಕ್ರೀಡಾ ಸಂಯೋಜಕ ದಯಾನಂದ್ ಕುಮಾರ್ ಮತ್ತು ತಂಡದವರು ವಿವಿಧ ಸ್ಪರ್ಧೆಗಳನ್ನು ನಡೆಸಿಕೊಟ್ಟರು. ಕು| ರಿಕಿತಾ ರವಿ ಸನಿಲ್, ಶ್ವೇತಾ ಸುವರ್ಣ, ಅನುಷಾ ಪೂಜಾರಿ ಕ್ರೀಡಾ ನಿರೂಪಣೆಗೈದರು. ಯುವಾಭ್ಯುದಯ ಸಮಿತಿಯ ಕಾರ್ಯಾಧ್ಯಕ್ಷ ನಾಗೇಶ್ ಎನ್. ಕೋಟ್ಯಾನ್ ಸ್ವಾಗತಿಸಿದರು. ಅಸೋಸಿಯೇಶನ್‌ನ ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ ಶಾಂತಿ ಅವರು ಅತಿಥಿಗಳನ್ನು ಪರಿಚಯಿಸಿ ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾ ಸಂಚಾಲಕ ರವಿ ಎಸ್. ಸನಿಲ್ ಅವರು ವಿಜೇತರ ಯಾದಿ ಪ್ರಕಟಿಸಿದರು.
ಯುವಾಭ್ಯುದಯದ ಗೌರವ ಕಾರ್ಯದರ್ಶಿ ಉಮೇಶ್ ಎನ್. ಕೋಟ್ಯಾನ್ ವಂದಿಸಿದರು. ವಾರ್ಷಿಕ “ಕೋಟಿ-ಚೆನ್ನಯ’ಕ್ರೀಡಾಕೂಟದ ಚಾಂಪಿಯನ್‌ಶಿಪ್ ಪ್ರಥಮ ಟ್ರೋಫಿಯನ್ನು ವಸಾಯಿ ಸಮಿತಿ ತನ್ನದಾಗಿಸಿಕೊಂಡರೆ, ಬೊರಿವಲಿ ಸಮಿತಿ ದ್ವಿತೀಯ ಸ್ಥಾನಕ್ಕೆ ಪಾತ್ರ ವಾಯಿತು.
Related Articles
-ಚಂದ್ರಶೇಖರ ಎಸ್. ಪೂಜಾರಿ ,
ಅಧ್ಯಕ್ಷರು, ಬಿಲ್ಲವರ ಅಸೋಸಿಯೇಶನ್ ಮುಂಬಯಿ
Advertisement
ಚಿತ್ರ-ವರದಿ: ರೋನ್ಸ್ ಬಂಟ್ವಾಳ್