ಬೆಂಗಳೂರು: ಯಾವುದೇ ಧಾರ್ಮಿಕ ಕಾರ್ಯಕ್ರಮಕ್ಕೆ ಧಕ್ಕೆ ತರುವುದು, ಕಲ್ಲು ತೂರುವುದು ಕಾನೂನುಬಾಹಿರ. ಇಂತಹ ಚಟುವಟಿಕೆಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ, ಹತ್ತಿಕ್ಕುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆಯಲ್ಲಿ ಗಲಾಟೆಗೆ ಕಾರಣಕರ್ತರಾದ 43 ದುಷ್ಕರ್ಮಿಗಳನ್ನು ಬಂಧಿಸಲಾಗಿದ್ದು, ಅವರ ಮೇಲೆ ಮೊಕದ್ದಮೆಗಳನ್ನು ಹೂಡಲಾಗುತ್ತದೆ. ಶಿವಮೊಗ್ಗ ಸಂಪೂರ್ಣ ನಿಯಂತ್ರಣದಲ್ಲಿದೆ. ಶಾಂತಿ ಕಾಪಾಡಲು ಎಲ್ಲ ಕ್ರಮಗಳನ್ನೂ ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದರು.
ರಾಜ್ಯ ಸರ್ಕಾರ ತುಷ್ಟೀಕರಣ ನೀತಿ ಅನುಸರಿಸುತ್ತಿದೆ. ಅಶಾಂತಿ ಇರಬೇಕೆಂಬ ಸರ್ಕಾರದ ಮನಸ್ಥಿತಿ ಶಿವಮೊಗ್ಗ ಮಾತ್ರವಲ್ಲದೆ ಇಡೀ ರಾಜ್ಯದಲ್ಲಿ ಕಾಣುತ್ತಿದೆ ಎಸ್‌ಪಿಯವರ ಮೇಲೆಯೇ ಕಲ್ಲು ತೂರಾಟ, ಹಲ್ಲೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಸರ್ಕಾರ ಬಾಯಿಗೆ ಬೀಗ ಹಾಕಿಕೊಂಡಿದೆ. ಕೋಮುಗಲಭೆ ಮಾಡಿದವರ ಆಸ್ತಿ ಜಪ್ತಿ ಮಾಡಬೇಕು. ಗೂಂಡಾ ಕಾಯ್ದೆ ವಿಧಿಸಬೇಕು.
-ಡಾ.ಸಿ.ಎನ್.ಅಶ್ವತ್ಥನಾರಾಯಣ, ಮಾಜಿ ಡಿಸಿಎಂ