Advertisement
ಸರಕಾರದ ಆದೇಶ ಪ್ರಶ್ನಿಸಿ ಆಯ್ಕೆಗೊಂಡ ಕೆಲ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿ ಕಾಯ್ದಿರಿಸಿದ್ದ ಆದೇಶವನ್ನು ಕೆಎಟಿಯ ನ್ಯಾಯಾಂಗ ಸದಸ್ಯ ಟಿ. ನಾರಾಯಣ ಸ್ವಾಮಿ ನೇತೃತ್ವದ ಪೀಠ ಮಂಗಳವಾರ ಪ್ರಕಟಿಸಿದ್ದು, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.
ವಿಚಾರಣೆ ವೇಳೆ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆರ್. ಸುಬ್ರಹ್ಮಣ್ಯ, ಇದೊಂದು ದೊಡ್ಡ ಮಟ್ಟದ ಹಗರಣವಾಗಿದೆ. ನೇಮಕಾತಿ ಪ್ರಾಧಿಕಾರದ ವಿರುದ್ಧವೇ ಅಕ್ರಮವೆಸಗಿರುವ ಆರೋಪವಿರುವ ಹಿನ್ನೆಲೆಯಲ್ಲಿ ಕಳಂಕಿತ ಹಾಗೂ ಕಳಂಕಿತರಲ್ಲದ ಅಭ್ಯರ್ಥಿಗಳನ್ನು ಪ್ರತ್ಯೇಕಿಸಲು ಸಾಧ್ಯವಿಲ್ಲ. ಪ್ರಕರಣದಲ್ಲಿ ವ್ಯಾಪಕ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಮರುಪರೀಕ್ಷೆಯ ತೀರ್ಮಾನ ಕೈಗೊಳ್ಳಲಾಗಿದೆ ಎಂದು ವಿವರಿಸಿದ್ದರು. ಸರಕಾರದ ಈ ವಾದವನ್ನು ಕೆಎಟಿ ಮಾನ್ಯ ಮಾಡಿದೆ.
Related Articles
ಪಿಎಸ್‌ಐ ನೇಮಕಾತಿಗೆ ನಡೆಸಲಾಗಿದ್ದ ಲಿಖೀತ ಪರೀಕ್ಷೆ ರದ್ದುಪಡಿಸಿ ಮರು ಪರೀಕ್ಷೆ ನಡೆಸುವ ಸಂಬಂಧ ಎ. 29ರಂದು ಸರಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕರಹಿತ ಮತ್ತು ಕಳಂಕಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ ಹಿಂದಿನ ಅಧಿಸೂಚನೆ ಪ್ರಕಾರವೇ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ, ನೇಮಕಾತಿ ಆದೇಶ ನೀಡಲು ಸರಕಾರಕ್ಕೆ ನಿರ್ದೇಶಿಸಬೇಕೆಂದು ಅರ್ಜಿದಾರರು ಕೋರಿದ್ದರು. ಜತೆಗೆ, ಅಂತಿಮ ಪಟ್ಟಿಯು ಈ ಅರ್ಜಿ ಸಂಬಂಧ ಕೆಎಟಿ ಕೈಗೊಳ್ಳುವ ನಿರ್ಧಾರಕ್ಕೆ ಒಳಪಟ್ಟಿರುವಂತೆ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲು ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮಧ್ಯಾಂತರ ಮನವಿ ಮಾಡಿದ್ದರು.
Advertisement