ಪುಂಜಾಲಕಟ್ಟೆ: ಜಾನುವಾರುಗಳನ್ನು ಅಕ್ರಮವಾಗಿ ಮಾರಾಟ ಮಾಡುವ ಜಾಲವೊಂದನ್ನು ಶನಿವಾರ ರಾತ್ರಿ ಪುಂಜಾಲಕಟ್ಟೆ ಪೊಲೀಸರು ಪತ್ತೆ ಹಚ್ಚಿದ್ದು, ಜಾನುವಾರುಗಳ ಸಹಿತ ಸಾಗಾಟಕ್ಕೆ ಬಳಸಿದ ವಾಹನಗಳನ್ನು ವಶ ಪಡಿಸಿಕೊಂಡಿದ್ದಾರೆ.
ಕಾವಳಮೂಡೂರು ಗ್ರಾಮದ ಎನ್.ಸಿ .ರೋಡ್‌ನಲ್ಲಿ ಕಾಡು ಪ್ರದೇಶದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಅಮಾನವೀಯವಾಗಿ ಕೂಡಿ ಹಾಕಿ ವಾಹನಗಳಲ್ಲಿ ಸಾಗಾಟಕ್ಕೆ ಪ್ರಯತ್ನಿಸುತ್ತಿದ್ದ ವೇಳೆ ಪುಂಜಾಲಕಟ್ಟೆ ಎಸ್‌ಐ ಸೌಮ್ಯಾ ಜೆ. ಅವರ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ಮೀನು ವಾಹನದಲ್ಲಿ ಅಕ್ರಮ ಗೋ ಮಾಂಸ ಸಾಗಾಟ: 10 ಟನ್ ಮಾಂಸ ವಶ
ಬೊಲೆರೊ ಜೀಪ್, ಆಮ್ನಿ ಕಾರು, ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡು 16 ಜಾನುವಾರುಗಳನ್ನು ಪೊಲೀಸರು ರಕ್ಷಿಸಿದ್ದಾರೆ. ಆರೋಪಿಗಳಲ್ಲಿ ಓರ್ವನನ್ನು ವಶಪಡಿಕೊಂಡಿದ್ದು, ಇನ್ನಿತರರು ಪರಾರಿಯಾಗಿದ್ದಾರೆ. ಈ ಕುರಿತು ಪುಂಜಾಲಕಟ್ಟೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.