Advertisement

Bengaluru; 3 ಅಕ್ರಮ ಡ್ಯಾನ್ಸ್ ಬಾರ್ ಗಳ ಮೇಲೆ ದಾಳಿ: 87 ಮಹಿಳೆಯರ ರಕ್ಷಣೆ

07:43 PM Jun 19, 2023 | Team Udayavani |

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಮೂರು ಡ್ಯಾನ್ಸ್ ಬಾರ್‌ಗಳ ಮೇಲೆ ಕೇಂದ್ರ ಅಪರಾಧ ವಿಭಾಗದ ಪೊಲೀಸರು ಭಾನುವಾರ ಏಕಕಾಲದಲ್ಲಿ ದಾಳಿ ನಡೆಸಿ ಒಂಬತ್ತು ಮಂದಿಯನ್ನು ಬಂಧಿಸಿ, 210 ಗ್ರಾಹಕರನ್ನು ವಶಕ್ಕೆ ಪಡೆದು, 87 ಮಹಿಳೆಯರನ್ನು ರಕ್ಷಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

Advertisement

ಬಾರ್‌ಗಳಲ್ಲಿ ಅಕ್ರಮವಾಗಿ ಲೈವ್ ಬ್ಯಾಂಡ್‌ಗಳನ್ನು ನಡೆಸುತ್ತಿರುವ ಬಗ್ಗೆ ಬಂದ ದೂರುಗಳ ಆಧಾರದ ಮೇಲೆ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಅಲ್ಲಿ ಮಹಿಳೆಯರನ್ನು ಗ್ರಾಹಕರ ಮುಂದೆ ನೃತ್ಯ ಮಾಡಲು ಬಳಸಿಕೊಳ್ಳಲಾಗುತ್ತಿತ್ತು ಎಂದು ಹೇಳಿದ್ದಾರೆ.

ಬಂಧಿತ ಒಂಬತ್ತು ಮಂದಿ ಈ ಬಾರ್‌ಗಳ ಮಾಲಕರು ಮತ್ತು ವ್ಯವಸ್ಥಾಪಕರಾಗಿದ್ದಾರೆ. ಮಹಿಳೆಯರನ್ನು ದೇಶದ ವಿವಿಧ ಭಾಗಗಳಿಂದ ಕರೆತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರಲ್ಲಿ ಕೆಲವರು ವಿದೇಶದಿಂದ ಬಂದವರು ಇದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next