Advertisement
ತಾಪಂ ಕಚೇರಿ ಮುಂದೆ ಪ್ರತಿಭಟಿಸಿ ತಹಶೀಲ್ದಾರ್ ಎಂ.ದಯಾನಂದ್‌ಗೆ ಮನವಿ ನೀಡಿ ಮಾತನಾಡಿದ ಜಿಲ್ಲಾಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್, ದೇಶಕ್ಕೆ ಸ್ವಾತಂತ್ರ್ಯ ಬಂದು 7 ದಶಕ ಕಳೆದರೂ ಗ್ರಾಮೀಣ ಪ್ರದೇಶದ ಅಭಿವೃದ್ಧಿ ಮಾತ್ರ ಮರೀಚಿಕೆಯಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಕೋಟ್ಯಂತರ ರೂ. ಅನುದಾನ ಗ್ರಾಪಂಗಳಿಗೆ ಬಿಡುಗಡೆ ಮಾಡುತ್ತಿದ್ದರೂ ಸಮರ್ಪಕವಾಗಿ ಬಳಕೆ ಆಗುತ್ತಿಲ್ಲ. ಚುನಾವಣೆ ಸಮಯದಲ್ಲಿ ಮಾತ್ರ ಜನಪ್ರತಿನಿಧಿಗಳಿಗೆ ಹಳ್ಳಿಗಳು ಜ್ಞಾಪಕಕ್ಕೆ ಬರುತ್ತವೆ ಎಂದು ವ್ಯಂಗ್ಯವಾಡಿದರು.
Related Articles
Advertisement
ಯೋಜನೆ ದುರ್ಬಳಕೆ: ಗ್ರಾಮೀಣ ಪ್ರದೇಶಗಳಲ್ಲಿ ಮೂಲ ಸೌಕರ್ಯ, ಜನಸಾಮಾನ್ಯರ ಸಮಸ್ಯೆ ಆಲಿಸಿ, ಪರಿಹಾರ ನೀಡುವ ಗ್ರಾಮಸಭೆಗಳು ಛಾಯಾಚಿತ್ರಕ್ಕೆ ಸೀಮಿತವಾಗಿವೆ. ಹಳ್ಳಿಗಳಿಗೆ ಚರಂಡಿ, ವಿದ್ಯುತ್ ದೀಪ, ರಸ್ತೆಗಳ ಅಭಿವೃದ್ಧಿಗೆ ಬಿಡುಗಡೆಯಾಗುವ 15ನೇ ಹಣಕಾಸಿನ ಯೋಜನೆ ದುರ್ಬಳಕೆ ಆಗಿದ್ದು, ತನಿಖೆ ಮಾಡಬೇಕು ಎಂದು ಹೇಳಿದರು.
ಗ್ರಾಪಂಗಳಲ್ಲಿ ನಡೆದಿರುವ ಇ, ಬಿ ಖಾತೆಗಳ ಅಕ್ರಮ ಹಾಗೂ ನರೇಗಾದ ಕಾಮಗಾರಿಗಳಲ್ಲಿ ನಡೆದಿ ರುವ ಭ್ರಷ್ಟಾಚಾರವನ್ನು ತನಿಖೆ ಮಾಡಲು ವಾರದೊ ಳಗೆ ವಿಶೇಷ ತಂಡ ರಚನೆ ಮಾಡಬೇಕು, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕೆಂದು ಮನವಿ ನೀಡಿ ಆಗ್ರಹಿಸಿದರು.
ಹೋರಾಟದಲ್ಲಿ ತಾಲೂಕು ಅಧ್ಯಕ್ಷ ಮರಗಲ್ ಮುನಿಯಪ್ಪ, ಬೂದಿಕೋಟೆ ಅನಿಲ್, ತಾಲೂಕು ಅಧ್ಯಕ್ಷ ಚಲಪತಿ, ಐತಾಂಡಹಳ್ಳಿ ಮುನ್ನಾ, ರಾಮಸಾಗರ ಸಂದೀಪ್‌ಗೌಡ, ಸಂದೀಪ್‌ರೆಡ್ಡಿ, ಬೂದಿಕೋಟೆ ನಾಗಯ್ಯ, ಮುನಿರಾಜು, ಕಾಮಸಮುದ್ರ ಮುನಿಕೃಷ್ಣ, ಕೋಲಾರ ತಾಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಸುರೇಶ್‌ಬಾಬು, ವೇಣು, ಗಿರೀಶ್, ನಾಗೇಶ್, ತೇಜಸ್, ತೆರ್ನಹಳ್ಳಿ ಆಂಜಿನಪ್ಪ, ಮಾಲೂರು ತಾಲೂಕು ಅಧ್ಯಕ್ಷ ಯಲ್ಲಣ್ಣ, ಹರೀಶ್, ಜಿಲ್ಲಾ ಕಾರ್ಯಾಧ್ಯಕ್ಷ ವಕ್ಕಲೇರಿ ಹನುಮಯ್ಯ ಮುಂತಾದವರಿದ್ದರು.