Advertisement

ರಸಗೊಬ್ಬರ ಅಕ್ರಮ ಮಾರಾಟ: ಕೃಷಿ ಜಾಗೃತ ದಳದ ಅಧಿಕಾರಿಗಳು ದಾಳಿ; ಕೇಸ್ ದಾಖಲು

05:55 PM May 12, 2022 | Team Udayavani |

ಗಂಗಾವತಿ: ರಸಗೊಬ್ಬರ ಅಕ್ರಮ ಮಾರಾಟ ಮಾಡುವ ಅಂಗಡಿಗಳ ಮೇಲೆ ಕೃಷಿ ಜಾಗೃತ ದಳ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ರಸಗೊಬ್ಬರ ವಶಕ್ಕೆ ಪಡೆದು ಕೇಸ್ ದಾಖಲಿಸಿದ್ದಾರೆ.

Advertisement

ಗಂಗಾವತಿ ನಗರದ ರಾಯಚೂರು ರಸ್ತೆಯಲ್ಲಿರುವ ನಮ್ಮ ಗ್ರೋವರ್ ಸೆಂಟರ್ ರಸಗೊಬ್ಬರ ಮಾರಾಟ ಮಳಿಗೆಯಲ್ಲಿ ಕಳೆದ ಹಲವು ದಿನಗಳಿಂದ ಕೃಷಿ ಇಲಾಖೆಯ ಪರವಾನಿಗೆ ಇಲ್ಲದೆ ರಸಗೊಬ್ಬರವನ್ನು ಮಾರಾಟ ಮಾಡಲಾಗುತ್ತಿತ್ತು.

ಅಂಗಡಿಯ ಹೊರಗೆ ರಸಗೊಬ್ಬರವನ್ನು ಮಾರಾಟ ಮಾಡಲು ಇಟ್ಟ ಸಂದರ್ಭದಲ್ಲಿ ಖಚಿತ ಮಾಹಿತಿಯ ಮೇರೆಗೆ ಕೃಷಿ ಜಾಗೃತ ದಳದ ಅಧಿಕಾರಿ ಹಾಗೂ ರಸಗೊಬ್ಬರ ಪರಿವೀಕ್ಷ ಕ ಎ. ನಿಂಗಪ್ಪ ನೇತೃತ್ವದ ಕೃಷಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಅಗತ್ಯ ದಾಖಲೆ ಇಲ್ಲದೆ ಮಾರಾಟ ಮಾಡಲು ಸಂಗ್ರಹಿಸಿದ್ದ 50 ಕೆ.ಜಿ.ತೂಕದ ನಲವತ್ತ 47 ಚೀಲ ರಸಗೊಬ್ಬರ (70500 ರೂ ಗಳ ಮೌಲ್ಯದ )ವನ್ನು ವಶಕ್ಕೆ ಪಡೆದು ರಸಗೊಬ್ಬರ ನಿಯಂತ್ರಣ ಆದೇಶ 1985 ಅನ್ವಯ ಕೇಸು ದಾಖಲಿಸಲಾಗಿದೆ.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳಾದ ಪ್ರಕಾಶ ಲಕ್ಷ್ಮಿ ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next