Advertisement

Gokarna: ಅಕ್ರಮ ಮದ್ಯ ಸಾಗಾಟ… ಪೊಲೀಸ್ ಸಿಬ್ಬಂದಿ ಸೇರಿ ಇಬ್ಬರ ಬಂಧನ, ಸೊತ್ತು ವಶಕ್ಕೆ

08:59 PM Jun 12, 2024 | Team Udayavani |

ಗೋಕರ್ಣ: ಗೋವಾದಿಂದ ಅಕ್ರಮವಾಗಿ ಮದ್ಯವನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಓಂ ಬೀಚ್ ಬಳಿ ಬಂಧಿಸುವಲ್ಲಿ ಗೋಕರ್ಣ ಪೊಲೀಸರು ಯಶಸ್ವಿಯಾಗಿದ್ದಾರೆ.

Advertisement

ಕಾರವಾರದ ಕದ್ರಾ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಸಂತೋಷ ಲಮಾಣಿ ಈತನೇ ಪ್ರಮುಖ ಆರೋಪಿಯಾಗಿದ್ದು, ತನ್ನ ಕಾರಿನಲ್ಲಿ ೧ ಲಕ್ಷ ರೂ. ಗೂ ಅಧಿಕ ಮೌಲ್ಯದ ಗೋವಾದ ಅಕ್ರಮ ಮದ್ಯವನ್ನು ಗೋಕರ್ಣದಲ್ಲಿರುವ ಕೆಲವು ರೆಸಾರ್ಟ್ ಹಾಗೂ ಹೋಮ್ ಸ್ಟೇಗಳಿಗೆ ಪೂರೈಕೆ ಮಾಡಲು ಸಾಗಾಟ ಮಾಡುತ್ತಿದ್ದ ಎನ್ನಲಾಗಿದೆ.

ಈ ಕುರಿತು ಖಚಿತ ಮಾಹಿತಿ ಮೇರೆಗೆ ಗೋಕರ್ಣ ಪೊಲೀಸರು ದಾಳಿ ನಡೆಸಿ ಆರೋಪಿಯಾದ ಪೊಲೀಸ್ ಸಿಬ್ಬಂದಿ ಸಂತೋಷ ಲಮಾಣಿ, ಇನ್ನೋರ್ವ ಆರೋಪಿ, ಕಾರು, ಮದ್ಯವನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ಪೊಲೀಸ್ ಸಿಬ್ಬಂದಿಯೇ ಈ ಅಕ್ರಮ ದಂಧೆಯಲ್ಲಿ ತೊಡಗಿಕೊಂಡಿದ್ದ ಎನ್ನುವುದು ಪೊಲೀಸ್ ಇಲಾಖೆಗೆ ಒಂದು ಕಪ್ಪು ಚುಕ್ಕೆ ಎಂಬಂತಾಗಿದೆ. ಈ ಕುರಿತು ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next