Advertisement
ಆಹಾರ ಮತ್ತು ನಾಗರಿಕ ಸರಬರಾಜುಇಲಾಖೆ ಅಂಕಿ-ಅಂಶಗಳೇ ಈ ಅಕ್ರಮ ದಂಧೆಗೆ ಸಾಕ್ಷಿಯಾಗಿದೆ. ಜಿಲ್ಲೆಯಲ್ಲಿ ಕೇವಲ ಎರಡೂವರೆವರ್ಷಗಳಲ್ಲಿ 55 ಪಡಿತರ ಅಕ್ಕಿ ಸಾಗಾಟ-ಮಾರಾಟತಡೆದು ಎಫ್‌ಐಆರ್ ದಾಖಲಿಸಿದ್ದು, ಬರೋಬ್ಬರಿ2.16 ಕೋಟಿ ರೂ.ಗಳ 7 ಸಾವಿರಕ್ಕೂ ಅಧಿಕ ಕ್ವಿಂಟಲ್ ಅಕ್ಕಿ ಜಪ್ತಿ ಮಾಡಿಕೊಂಡಿದೆ. ಇನ್ನೂ ಇಲಾಖೆ ಕಣ್ತಪ್ಪಿಸಿ ಕೋಟ್ಯಂತರ ಮೌಲ್ಯದ ಅಕ್ಕಿಸಾಗಾಟ ನಡೆದಿದೆ. ಬೀದರ ಎರಡು ರಾಜ್ಯಗಳ ಗಡಿಗೆ ಹೊಂದಿಕೊಂಡಿರುವ ಹಿನ್ನೆಲೆ ಅಕ್ರಮಚಟುವಟಿಕೆ ರಾಜಾರೋಷವಾಗಿ ನಡೆಯುತ್ತಿದ್ದು, ಅಧಿಕಾರಿಗಳು ಒಂದೆರಡು ದಾಳಿ ನಡೆಸಿ ಕೈ ತೊಳೆದುಕೊಳ್ಳುತ್ತಿದ್ದಾರೆ.
Related Articles
Advertisement
2 ವರ್ಷದಲ್ಲಿ ವಶಪಡಿಸಿಕೊಂಡಿದ್ದೆಷ್ಟು? : ಬೀದರ ಜಿಲ್ಲೆಯಲ್ಲಿ 2018ರ ಮಾರ್ಚ್‌ನಿಂದ 2019ರ ಮಾರ್ಚ್‌ವರೆಗೆ ವಾಹನ ಮತ್ತು ಮನೆಗಳ ಮೇಲೆ ಆಹಾರ ಮತ್ತು ನಾಗರಿಕ ಸರಬರಾಜಿ ಇಲಾಖೆ ದಾಳಿ ನಡೆಸಿ ಪಡಿತರ ಅಕ್ಕಿ ಸಾಗಾಟದ 13 ಎಫ್‌ಐಆರ್ ದಾಖಲಿಸಿ 69.23 ಲಕ್ಷ ರೂ. ಮೌಲ್ಯದ 2423 ಕ್ವಿಂಟಲ್ ಅಕ್ಕಿ ಜಪ್ತಿ ಮಾಡಿಕೊಂಡಿದೆ. 2019ರ ಏಪ್ರಿಲ್‌ನಿಂದ 2020ರ ಮಾರ್ಚ್‌ವರೆಗೆ 31 ಗುನ್ನೆ ದಾಖಲಿಸಿ 1.23 ಕೋಟಿ ರೂ. ಮೌಲ್ಯದ 3774 ಕ್ವಿಂಟಲ್ ಮತ್ತು 40-50 ಕೆಜಿ ತೂಕದ 430 ಚೀಲ ಅಕ್ಕಿ ಹಾಗೂಏಪ್ರಿಲ್‌ನಿಂದ ಆಗಸ್ಟ್‌ವರೆಗೆ 23.20 ಲಕ್ಷ ರೂ. ಮೌಲ್ಯದ 1368 ಕ್ವಿಂಟಲ್ ಅಕ್ಕಿ ವಶಕ್ಕೆ ಪಡೆಯಲಾಗಿದೆ. 11 ಎಫ್‌ಐಆರ್ ದಾಖಲು ಮಾಡಲಾಗಿದೆ.
ಬೀದರ ಗಡಿ ಜಿಲ್ಲೆಯಾಗಿರುವ ಕಾರಣ ಪಡಿತರ ಅಕ್ಕಿ ಅಕ್ರಮ ಸಾಗಾಟ ಪ್ರಕರಣಗಳು ಪತ್ತೆಯಾಗುತ್ತಿವೆ. ಕಾಳಸಂತೆಯಲ್ಲಿ ಅಕ್ಕಿ ಮಾರಾಟ ಮತ್ತು ಖರೀದಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುತ್ತಿದೆ. ಇದಕ್ಕಾಗಿ ಸಹಾಯಕ ಆಯುಕ್ತರ ನೇತೃತ್ವದಲ್ಲಿ ಎರಡು ತಂಡ ಮಾಡಲಾಗಿದೆ. ಅಕ್ರಮ ಚಟುವಟಿಕೆ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. – ಬಾಬು ರೆಡ್ಡಿ, ಉಪ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಬೀದರ
-ಶಶಿಕಾಂತ ಬಂಬುಳಗೆ