Advertisement

Chikmagalur ಅಕ್ರಮ ಭೂ ಮಂಜೂರು ಕೇಸ್: ಕಡೂರು ತಹಶೀಲ್ದಾರ್ ಆಗಿದ್ದ ಉಮೇಶ್ ಪೊಲೀಸ್ ಕಸ್ಟಡಿಗೆ

01:22 PM Aug 27, 2023 | Team Udayavani |

ಚಿಕ್ಕಮಗಳೂರು: ಅಕ್ರಮ ಭೂ ಮಂಜೂರು ಪ್ರಕರಣ ಸಂಬಂಧ ಬಂಧನ ಒಳಗಾಗಿರುವ ಕಡೂರು ತಾಲೂಕಿನ ಹಿಂದಿನ ತಹಶೀಲ್ದಾರ್ ಉಮೇಶ್ ಅವರನ್ನು ವಿಚಾರಣೆ ಹಿನ್ನೆಲೆ ಪೊಲೀಸ್ ಇಲಾಖೆ ನಾಲ್ಕು ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದೆ.

Advertisement

ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಸುದ್ದಿಗಾರರೊಂದಿಗೆ ಮಾತನಾಡಿ, ಅಕ್ರಮ ಭೂ ಮಂಜೂರಾತಿ ಪ್ರಕರಣ ಸಂಬಂಧಪಟ್ಟ ತರೀಕೆರೆ ಉಪ ವಿಭಾಗಾಧಿಕಾರಿ ಡಾ. ಕಾಂತರಾಜ್ ನೀಡಿದ ದೂರಿನ ಮೇರೆಗೆ ತಹಶೀಲ್ದಾರ್ ಜೆ.ಉಮೇಶ್ ಅವರನ್ನು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆ ಸಂಬಂಧ ನಾಲ್ಕು ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆದು ಕೊಳ್ಳಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ:Special Story: ಕಾಳಗದ ಅಂಗಳ ಕೊಲೊಸಿಯಮ್‌: ರೋಮ್‌ ನಗರದ ರಮ್ಯ ತಾಣ

ತರೀಕೆರೆ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದರು.

ಉಳಿಗನಾರು ಗ್ರಾಮದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಅಕ್ರಮ ದಾಖಲಾತಿ ಮಾಡಿರುವ ಆರೋಪವನ್ನು ಜೆ ಉಮೇಶ್ ಎದುರಿಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next