ಕೊರಟಗೆರೆ : ಚಿಲ್ಲರೆ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆಯೊಬ್ಬರನ್ನು ಬಂಧಿಸಿದ ಘಟನೆ ತಾಲೂಕಿನ ಕಸಬಾ ಹೋಬಳಿಯ ಹುಲಿಕುಂಟೆ ಗ್ರಾಮದಲ್ಲಿ ನಡೆದಿದೆ.
ಹುಲಿಗುಂಟೆ ಗ್ರಾಮದಲ್ಲಿ ಅಂಗಡಿ ಇಟ್ಟುಕೊಂಡಿದ್ದ ಗಾಯತ್ರಿ( (45 ವರ್ಷ) ಎಂಬ ಮಹಿಳೆಯನ್ನು ಬಂಧಿಸಲಾಗಿದೆ.
ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಪಡೆದ ತಾಲೂಕಿನ ಅಬಕಾರಿ ಇಲಾಖೆಯ ನಿರೀಕ್ಷಕಿ ಶ್ರೀ ಲತಾ ಅವರ ತಂಡ ಗಾಯತ್ರಿ ಅವರಿಗೆ ಸೇರಿದ ಚಿಲ್ಲರೆ ಅಂಗಡಿಯ ಮೇಲೆ ದಾಳಿ ಮಾಡಿದ್ದಾರೆ. ದಾಳಿ ಸಮಯದಲ್ಲಿ 8.640 ಲೀಟರ್ ಮದ್ಯವನ್ನು ಮಾರಾಟದ ಉದ್ದೇಶಕ್ಕಾಗಿ ಅಕ್ರಮವಾಗಿ ಸಂಗ್ರಹಿಸಿರುವುದು ಕಂಡು ಬಂದಿದೆ.
ಸದ್ಯ ಅಧಿಕಾರಿಗಳು ಮದ್ಯ ಸಮೇತ ಮಹಿಳೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು ಮಹಿಳೆ ಹಾಗೂ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ದಾಳಿ ಸಂದರ್ಭದಲ್ಲಿ, ಸಿಬ್ಬಂದಿಗಳಾದ ಹಮೀದ್ ಬುಡಕಿ, ಮಲ್ಲಿಕಾರ್ಜುನ್, ಮಂಜುಳಾ ,ಮಧು ಹಾಜರಿದ್ದರು .
ಇದನ್ನೂ ಓದಿ : ಆರ್ಟಿಕಲ್ 370 ರದ್ದತಿ ಬಳಿಕ ಕಾಶ್ಮೀರದಲ್ಲಿ ಭಾರಿ ಸಂಖ್ಯೆಯ ಉಗ್ರರ ಹತ್ಯೆ : ಮಾಹಿತಿ