Advertisement
ದೋಟ ನಿವಾಸಿ ವಿನಯ್ ಬಂಧಿತ ಆರೋಪಿ. ಈತ ಅಂಗಡಿಯ ಸಮೀಪ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ.ಈ ಕುರಿತು ಮಾಹಿತಿ ಪಡೆದ ಬಂಟ್ವಾಳ ಗ್ರಾಮಾಂತರ ಇನ್‌ಸ್ಪೆಕ್ಟರ್ ಸಂತೋಷ್ ಶೆಟ್ಟಿ ಅವರ ತಂಡ ದಾಳಿ ನಡೆಸಿ ಆರೋಪಿಯ ಜತೆಗೆ ಆತನಿಂದ 5,412 ರೂ. ಮೌಲ್ಯದ 18.05 ಲೀ. ಮದ್ಯ ಹಾಗೂ 650 ರೂ. ನಗದನ್ನು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.