Advertisement

ಅನಧಿಕೃತ ಮಸೀದಿ ನಿರ್ಮಾಣದ ಆರೋಪ: ಮೂರು ದಿನದೊಳಗೆ ಸೂಕ್ತ ದಾಖಲೆ ನೀಡಲು ಸೂಚನೆ

10:20 AM Nov 06, 2022 | Team Udayavani |

ಚಿಕ್ಕಮಗಳೂರು : ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯ ಆಶ್ರಯ ಯೋಜನೆ ಬಡಾವಣೆಯಲ್ಲಿ ಅನಧಿಕೃತ ಮಸೀದಿ ನಿರ್ಮಾಣದ ಆರೋಪ ಕೇಳಿ ಬಂದಿದೆ.

Advertisement

ಆಶ್ರಯ ಯೋಜನೆ ಬಡಾವಣೆಯಲ್ಲಿ ಕಳೆದ ಅನೇಕ ವರ್ಷಗಳಿಂದ ಅನಧಿಕೃತವಾಗಿ ಮಸೀದಿ ನಿರ್ಮಾಣ ಮಾಡಿಕೊಂಡು ಬಂದಿದ್ದಾರೆಂಬ ಮಾಹಿತಿ ತಿಳಿದ ಕೂಡಲೇ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ನಗರಸಭೆ ಆಯುಕ್ತ ಬಸವರಾಜ್ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ ಅಲ್ಲದೆ ಇದಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಒಳಗಾಗಿ ಮಸೀದಿಗೆ ಸಂಬಂಧಪಟ್ಟ ಸೂಕ್ತ ದಾಖಲೆಗಳನ್ನು ಹಾಜರುಪಡಿಸುವಂತೆ ಸೂಚನೆ ನೀಡಿದರು.

ಒಂದು ವೇಳೆ ಸೂಕ್ತ ದಾಖಲೆಗಳು ಇಲ್ಲದಿದ್ದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ನಗರ ಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ಅಪಹರಣಕ್ಕೊಳಗಾದ ಚಿನ್ನದ ವ್ಯಾಪಾರಿಯ ಶವ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

Advertisement
Advertisement

Udayavani is now on Telegram. Click here to join our channel and stay updated with the latest news.

Next