Advertisement

Illegal mining case; ಬಿಜೆಪಿ ಮುಖಂಡರಾದ ಶಶಿರಾಜ್ ಶೆಟ್ಟಿ, ಪ್ರಮೋದ್ ಗೆ ಜಾಮೀನು

09:12 PM Jun 13, 2024 | Team Udayavani |

ಬೆಳ್ತಂಗಡಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ  ಬೆಳ್ತಂಗಡಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿಗೆ  ಜಾಮೀನು ಮಂಜೂರುಗೊಂಡಿದೆ. ಅದಲ್ಲದೇ ನಾಪತ್ತೆಯಾಗಿದ್ದ ಮತ್ತೊಬ್ಬ ಆರೋಪಿ ಪ್ರಮೋದ್ ದಿಡುಪೆಗೂ ಜೂ.13 ರಂದು(ಇಂದು) ಷರತ್ತು ಬದ್ಧ ಜಾಮೀನು ಮಂಜೂರುಗೊಂಡಿದೆ.

Advertisement

ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಮೇ 18 ರಂದು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಾಂ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪ್ರಮುಖ ಆರೋಪಿ ಪ್ರಮೋದ್ ಉಜಿರೆ ಹಾಗೂ ಶಶಿರಾಜ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಈ ಬಗ್ಗೆ  ಶಶಿರಾಜ್ ಶೆಟ್ಟಿಯನ್ನು ಮೇ 18 ರಂದು ರಾತ್ರಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿತ್ತು. 25 ದಿನಗಳ ಬಳಿಕ ಶಶಿರಾಜ್ ಶೆಟ್ಟಿಗೆ ಮಂಗಳೂರು ಸೆಷನ್ಸ್ ಕೋರ್ಟ್ ನಿಂದ ಜೂ.13 ರಂದು(ಇಂದು) ಜಾಮೀನು ಮಂಜೂರು ಮಾಡಿ ಆದೇಶ ಮಾಡಿದ್ದಾರೆ. ಶಶಿರಾಜ್ ಶೆಟ್ಟಿ ಪರ ನ್ಯಾಯವಾದಿ ಮಹೇಶ್ ಕಜೆ ಕೋರ್ಟ್ ನಲ್ಲಿ ವಾದಿಸಿದರು.

ಅಕ್ರಮ ಗಣಿಗಾರಿಕೆ ಪ್ರಕರಣದ ಪ್ರಮುಖ ಆರೋಪಿ ಪ್ರಮೋದ್ ದಿಡುಪೆ ಪ್ರಕರಣದ ಬಳಿಕ ಪರಾರಿಯಾಗಿದ್ದ ಆತನಿಗೂ ಷರತ್ತು ಬದ್ಧ ಜಾಮೀನು ಮಂಜೂರಾಗಿದೆ. ಪ್ರಮೋದ್ ದಿಡುಪೆ ಪರ ವಕೀಲರಾದ ಶಂಭು ಶರ್ಮ ಮತ್ತು ಅಜಯ್ ಸುವರ್ಣ ವಾದಿಸಿದರು.

ಸತ್ಯ ಧರ್ಮಕ್ಕೆ ಸಂದ ಜಯ: ಶಾಸಕ ಪೂಂಜಾ
ರಾಜಕೀಯ ಪ್ರೇರಿತವಾಗಿ ಬಿಜೆಪಿ ಯುವ ಮೋರ್ಚಾ ನಾಯಕರಾದ ಶಶಿರಾಜ್ ಶೆಟ್ಟಿಮತ್ತು ಪ್ರಮೋದ್ ಮೇಲೆ ತಾಲೂಕು ಆಡಳಿತ ವ್ಯವಸ್ಥೆ ದಾಖಲಿಸಿದ್ದ ಸುಳ್ಳು ಪ್ರಕರಣಕ್ಕೆ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿರುವುದು ಸತ್ಯ ಧರ್ಮಕ್ಕೆ ಸಂದ ಜಯವೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಪ್ರತಿಕ್ರಿಯಿಸಿದ್ದಾರೆ.

Advertisement

ರಾಜಕೀಯವಾಗಿ ಮುಂಚೂಣಿಗೆ ಬರುತ್ತಿರುವ ಉದಯೋನ್ಮಖ ನಾಯಕರ ಮನೋಸ್ಥೈರ್ಯವನ್ನು ಕುಗ್ಗಿಸುವ ದುರುದ್ದೇಶದಿಂದ ಕಾಂಗ್ರೆಸ್ ದ್ವೇಷ ರಾಜಕೀಯ ಪ್ರೇರಿತ ಬಂಧನದಿಂದ ಯಾರೂ ವಿಚಲಿತರಾಗುವ ಅಗತ್ಯವಿಲ್ಲ. ರಾತ್ರಿ ಕಳೆದ ಮೇಲೆ ಬೆಳಕು ಹರಿಯುವಂತೆ ಒಂದಲ್ಲ ಒಂದು ದಿನ ನ್ಯಾಯ ದೊರಕಲೇಬೇಕು. ಬಿಜೆಪಿ ಇಂತಹ ಕುಕೃತ್ಯಗಳಿಗೆ ಧೃತಿಗೆಡದೆ ಸತ್ಯ ಧರ್ಮದ ಹಾದಿಯಲ್ಲೇ ಕಾನೂನು ಪ್ರಕಾರ ಇಂತಹ ಸುಳ್ಳು ಪ್ರಕರಣಗಳ ಆಪಾದನೆಯನ್ನು ಮೆಟ್ಟಿನಿಂತು ಹೊರ ಬರಲಿದೆ ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next