Advertisement

ಅಕ್ರಮ ಗಣಿಗಾರಿಕೆ ಪ್ರಕರಣ; ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್

07:11 PM Mar 13, 2017 | Team Udayavani |

ಬೆಂಗಳೂರು: ತೀವ್ರ ವಿವಾದ ಹಾಗೂ ಸಚಿವ ಸ್ಥಾನ ಕಳೆದುಕೊಂಡು ಜೈಲು ಸೇರುವಂತಾಗಿದ್ದ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ.

Advertisement

ಮಾಜಿ ಸಚಿವ ರೆಡ್ಡಿ ವಿರುದ್ಧ 2004-2006ರಲ್ಲಿ ಬಳ್ಳಾರಿಯಲ್ಲಿ ನಡೆಸಿದ್ದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ತನಿಖೆ ನಡೆಸಿ, 2011ರಲ್ಲಿ ಸುಮಾರು 900 ಕೋಟಿ ರೂಪಾಯಿಯಷ್ಟು ಆಸ್ತಿ, ಪಾಸ್ತಿಯನ್ನು ಜಪ್ತಿ ಮಾಡಿತ್ತು.

ಈ ಪ್ರಕರಣದ ತನಿಖೆ ನಡೆಸಿದ್ದ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ನೇತೃತ್ವದ ಪೀಠ, ಜನಾರ್ದನ ರೆಡ್ಡಿ ವಿರುದ್ಧದ ಇಡಿ ಕೇಸ್ ಅನ್ನು ರದ್ದುಗೊಳಿಸಿ ತೀರ್ಪು ನೀಡಿದೆ. ಇದರಿಂದಾಗಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next