Advertisement
ಸುಪ್ರೀಂಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಶನಿವಾರ ಲೋಕಾಯುಕ್ತ ಪಿ. ವಿಶ್ವನಾಥ ಶೆಟ್ಟಿ ಹಾಗೂ ಎಸ್‌ಐಟಿ ತನಿಖಾ ತಂಡದ ಮುಖ್ಯಸ್ಥ ಚರಣ್‌ರೆಡ್ಡಿ ಸಭೆ ನಡೆಸಿದರು. ತನಿಖೆ ತ್ವರಿತಗತಿಯಲ್ಲಿ ಪೂರ್ಣಗೊಳಿಬೇಕೆಂದು ಲೋಕಾಯುಕ್ತ ಪಿ. ವಿಶ್ವನಾಥ ಶೆಟ್ಟಿ ಎಸ್‌ಐಟಿ ತಂಡಕ್ಕೆ ಸೂಚಿಸಿದ್ದಾರೆಂದು ಮೂಲಗಳು ತಿಳಿಸಿವೆ. ಅಕ್ರಮ ಗಣಿಗಾರಿಕೆ ಸಂಬಂಧ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ಪ್ರಕರಣದ ತನಿಖೆಯನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸಿ ವರದಿ ನೀಡುವಂತೆ ಎಸ್‌ಐಟಿ ಗೆ ಸೂಚಿಸಿತ್ತು. ಈ ಪ್ರಕರಣದಲ್ಲಿ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಗೆ ಅವಕಾಶ ಕಲ್ಪಿಸಿರುವ ಆರೋಪದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಧರಂಸಿಂಗ್, ಎಚ್.ಡಿ ಕುಮಾರಸ್ವಾಮಿ, ಹಿರಿಯ ಅಧಿಕಾರಿಗಳಾದ ವಿ.ಉಮೇಶ್, ಎಂ.ರಾಮಪ್ಪ ಹಾಗೂ ಗಂಗಾರಾಮ… ಬಡೇರಿಯಾ ಸೇರಿ 11 ಅಧಿಕಾರಿಗಳ ವಿರುದ್ಧ ತನಿಖೆ ನಡೆಯಲಿದೆ. Advertisement
ಅಕ್ರಮ ಗಣಿಗಾರಿಕೆ: ಎಸ್‌ಐಟಿಗೆ ತನಿಖೆ ಹೊಣೆ
12:54 PM Apr 02, 2017 | |
Advertisement
Udayavani is now on Telegram. Click here to join our channel and stay updated with the latest news.