Advertisement
ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣ ಸಂಬಂಧ ವಿಚಾರಣೆ ನಡೆದಿದ್ದು, ಜಾಮೀನು ನೀಡಬೇಕೆಂದು ಡಿ.ಕೆ.ಶಿವಕುಮಾರ್, ಉದ್ಯಮಿ ಸಚಿನ್ ನಾರಾಯಣ್, ಶರ್ಮಾ ಟ್ರಾವೆಲ್ಸ್‌ನ ಮಾಲೀಕ ಸುನೀಲ್‌ಕುಮಾರ್ ಶರ್ಮಾ, ದೆಹಲಿ ಕರ್ನಾಟಕ ಭವನದ ಸಿಬ್ಬಂದಿ ಆಂಜನೇಯ ಮತ್ತು ರಾಜೇಂದ್ರ ಎನ್ ವಿಶೇಷ ಕೋರ್ಟ್ ಮೊರೆ ಹೋಗಿದ್ದಾರೆ.
Related Articles
Advertisement
ವಾದ-ಪ್ರತಿವಾದ ಆಲಿಸಿದ ಕೋರ್ಟ್, ಆ.2ರಂದು ತೀರ್ಪು ಪ್ರಕಟಿಸುವುದಾಗಿ ಹೇಳಿತು. ಅಂದು ಎಲ್ಲ ಆರೋಪಿಗಳು ಕೋರ್ಟ್‌ನಲ್ಲಿ ಹಾಜರಿರಬೇಕು ಎಂದೂ ಆದೇಶ ನೀಡಿತು.
ಪ್ರಕರಣ ರದ್ದು ಕೋರಿ ಹೈಕೋರ್ಟ್‌ಗೆ ಡಿಕೆಶಿ ಅರ್ಜಿಬೆಂಗಳೂರು: ಆದಾಯ ಮೀರಿ ಆಸ್ತಿ ಸಂಪಾದಿಸಿದ ಆರೋಪದಲ್ಲಿ ತಮ್ಮ ವಿರುದ್ದ ಸಿಬಿಐ ದಾಖಲಿಸಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಆದಾಯ ಮೀರಿ ಆಸ್ತಿ ಸಂಪಾದಿಸಿದ ಆರೋಪದ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಹಾಗೂ ಅವರ ಆಪ್ತರ ಮೇಲೆ ಸಿಬಿಐ ದಾಳಿ ನಡೆಸಿತ್ತು. ಈ ಸಂಬಂಧ 2020ರಲ್ಲಿ ಡಿ.ಕೆ. ಶಿವಕುಮಾರ್ ಹಾಗೂ ಇತರರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿತ್ತು.