Advertisement
ಅಮೃತ್ ಪೌಲ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ 51ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್‌ನ ನ್ಯಾಯಾಧೀಶ ಯಶವಂತ ಕುಮಾರ್ ಅರ್ಜಿ ತಿರಸ್ಕರಿಸಿದ್ದಾರೆ. ಪಿಎಸ್‌ಐ ಹಗರಣದಲ್ಲಿ ಅಮೃತ್ ಪೌಲ್ 35ನೇ ಆರೋಪಿಯಾಗಿದ್ದಾರೆ. ಪ್ರಕರಣದಲ್ಲಿ ಇನ್ನೂ ಆರೋಪ ಪಟ್ಟಿ ಸಲ್ಲಿಸಿಲ್ಲ. ಅಲ್ಲದೆ, ಪೌಲ್ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ಜತೆಗೆ ಹಗರಣಕ್ಕೆ ಸಂಬಂಧಿಸಿದ ಸಿಸಿ ಕೆಮರಾ ದೃಶ್ಯಗಳನ್ನು ವಿಶ್ಲೇಷಣೆ ಮಾಡಬೇಕಿದೆ. ಹೀಗಾಗಿ ಜಾಮೀನು ನೀಡಬಾರದು ಎಂದು ಸಿಐಡಿ ಪರ ವಿಶೇಷ ಸರಕಾರಿ ಅಭಿಯೋಜಕ ಪಿ. ಪ್ರಸನ್ನ ಕುಮಾರ್ ವಾದಿಸಿದ್ದರು.
ಈ ಹಿನ್ನೆಲೆಯಲ್ಲಿ ಕೋರ್ಟ್ ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿತಿರಸ್ಕರಿಸಿ ಆದೇಶಿಸಿದೆ. ಕಳೆದ ಜುಲೈ 25ರಂದು 1ನೇ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಕೋರ್ಟ್ ಆರೋಪಿಯ ಜಾಮೀನು ಅರ್ಜಿ ತಿರಸ್ಕರಿಸಿತ್ತು. ಹೀಗಾಗಿ ಸೆಷನ್ಸ್ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಇಲ್ಲಿಯೂ ಅರ್ಜಿ ತಿರಸ್ಕೃತಗೊಂಡಿರುವುದರಿಂದ ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆಗಳಿವೆ.