ನವದೆಹಲಿ: ಜಾರಿ ನಿರ್ದೇಶನಾಲಯದ ಸಮನ್ಸ್‌ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಉತ್ತರ ನೀಡಿದ್ದಾರೆ. ಪ್ರತಿ ಕಾನೂನು ಸಮನ್ಸ್ ಸ್ವೀಕರಿಸಲು ನಾನು ಸಿದ್ಧನಿದ್ದೇನೆ ಆದರೆ ಈ ಇಡಿ ಸಮನ್ಸ್ ಕೂಡ ಹಿಂದಿನ ಸಮನ್ಸ್‌ನಂತೆ ಕಾನೂನುಬಾಹಿರವಾಗಿದೆ ಎಂದು ಅವರು ತಮ್ಮ ಉತ್ತರದಲ್ಲಿ ಬರೆದಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಕೇಜ್ರಿವಾಲ್ ಜಾರಿ ನಿರ್ದೇಶನಾಲಯದ ಈ ಸಮನ್ಸ್ ಸಂಪೂರ್ಣವಾಗಿ ರಾಜಕೀಯ ಪ್ರೇರಿತವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಈ ಸಮನ್ಸ್ ಹಿಂಪಡೆಯಬೇಕು. ನಾನು ನನ್ನ ಜೀವನವನ್ನು ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯಿಂದ ಬದುಕಿದ್ದೇನೆ, ಇದರಲ್ಲಿ ಮುಚ್ಚಿಡುವ ಯಾವುದೇ ವಿಚಾರ ಇಲ್ಲ ಎಂದು ಹೇಳಿದ್ದಾರೆ.
ಜಾರಿ ನಿರ್ದೇಶನಾಲಯ ಕೇಜ್ರಿವಾಲ್ ವಿಚಾರಣೆಗಾಗಿ ಸಮನ್ಸ್ ಕಳುಹಿಸಿರುವುದು ಇದು ಎರಡನೇ ಬಾರಿ ಎಂಬುದು ಗಮನಾರ್ಹ. ಇದಕ್ಕೂ ಮುನ್ನ, ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ನವೆಂಬರ್ 2 ರಂದು ಇಡಿಯಿಂದ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಲಾಗಿತ್ತು, ಆದರೆ ಅವರು ವಿಚಾರಣೆಗೆ ಹಾಜರಾಗಲಿಲ್ಲ.
ಏಪ್ರಿಲ್‌ನಲ್ಲಿ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೇಂದ್ರ ತನಿಖಾ ದಳವು ಒಂಬತ್ತು ಗಂಟೆಗಳ ಕಾಲ ಸಾಕ್ಷಿಯಾಗಿ ವಿಚಾರಣೆಗೆ ಒಳಪಡಿಸಿ ನನಗೆ 56 ಪ್ರಶ್ನೆಗಳನ್ನು ಕೇಳಿದೆ ಆದರೆ ಸಿಬಿಐ ಕೇಳಿದ ಎಲ್ಲಾ ಪ್ರಶ್ನೆಗಳು ನಕಲಿ ಎಂದು ಅವರು ಹೇಳಿದರು.
ಇದನ್ನೂ ಓದಿ: ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಲು ಕಾನೂನು ತೊಡಕಿದೆ: ಸಚಿವ ಡಾ.ಎಂ.ಸಿ.ಸುಧಾಕರ್