Advertisement

Illegal Property Case: ಸಿಬಿಐ, ಲೋಕಾದಿಂದ ಸ್ನೇಹಿತರು, ಕುಟುಂಬಸ್ಥರಿಗೆ ಕಿರುಕುಳ: ಡಿಸಿಎಂ

12:39 AM Aug 23, 2024 | Team Udayavani |

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ರಾಜ್ಯ ಸರಕಾರ ಸಿಬಿಐಯಿಂದ ಲೋಕಾಯುಕ್ತಕ್ಕೆ ವರ್ಗಾ ವಣೆ ಮಾಡಿತ್ತು. ಆದರೆ ಸಿಬಿಐ ಯವರು ತನಿಖೆಯನ್ನು ಮುಂದುವರಿಸಿದ್ದಾರೆ. ನೂರಕ್ಕೂ ಹೆಚ್ಚು ನನ್ನ ಸ್ನೇಹಿತರು, ಕುಟುಂಬಸ್ಥರಿಗೆ ತುಂಬಾ ಕಿರುಕುಳ ನೀಡುತ್ತಿದ್ದಾರೆ. ಇದೇ ಕೆಲಸವನ್ನು ಲೋಕಾಯುಕ್ತ ಕೂಡ ಮುಂದುವರಿಸಿದೆ. ಅವರಿಂದಲೂ ಕಿರುಕುಳ ಆಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದರು.

Advertisement

ಗುರುವಾರ ಲೋಕಾಯುಕ್ತ ವಿಚಾರಣೆ ಎದುರಿಸಿದ ಬಳಿಕ ಮಾಧ್ಯಮದ ಜತೆಗೆ ಮಾತನಾಡಿ, ಲೋಕಾಯುಕ್ತ 6 ತಿಂಗಳಿನಿಂದ ತನಿಖೆ ಮಾಡುತ್ತಿದೆ. ಇವರಿಗಿಂತ ಸಿಬಿಐಯವರೇ ಪರವಾಗಿಲ್ಲ. ಲೋಕಾಯುಕ್ತದವರು ವಿಚಿತ್ರ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಸಿಬಿಐಯವರು ಇನ್ನೂ ಪ್ರಶ್ನೆಗಳನ್ನೇ ಕೇಳಿಲ್ಲ, ಒಂದು ದಿನವೂ ವಿಚಾರಣೆಗೆ ಕರೆಯಲಿಲ್ಲ ಎಂದರು.

ದಾಖಲೆ ಸಲ್ಲಿಸುತ್ತೇನೆ
ಲೋಕಾಯುಕ್ತದ ಪ್ರಶ್ನೆಗಳಿಗೆ ಉತ್ತರಗಳನ್ನು ಕೊಟ್ಟಿದ್ದೇನೆ. ಒಂದಷ್ಟು ವಿಚಾರಗಳಲ್ಲಿ ಸ್ಪಷ್ಟನೆ ಪಡೆದುಕೊಳ್ಳಲು ಪ್ರಶ್ನೆಗಳನ್ನು ಕೇಳಿದ್ದು ಇದಕ್ಕೆ ಸಂಬಂಧಿಸಿದಂತೆ ನನ್ನ ಬಳಿ ಇರುವ ಪೂರಕವಾದ ದಾಖಲೆಗಳನ್ನು ಸಲ್ಲಿಸುತ್ತೇನೆ. ಬುಧವಾರ (ಆ. 21) ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದರು. ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮವಿದ್ದ ಕಾರಣ ಗುರುವಾರ ಹಾಜರಾಗುತ್ತೇನೆ ಎಂದು ಮನವಿ ಮಾಡಿಕೊಂಡಿದ್ದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next