Advertisement

Illegal Property Case: ಸಚಿವ ಜಮೀರ್‌ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್‌

03:36 AM Nov 17, 2024 | Team Udayavani |

ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ಸಂಬಂಧ ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ಗೆ ಡಿ.3 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್‌ ಜಾರಿಗೊಳಿಸಿದ್ದಾರೆ.

Advertisement

3 ವರ್ಷಗಳ ಹಿಂದೆ ಜಮೀರ್‌ ಅಹ್ಮದ್‌ ಖಾನ್‌ ವಿರುದ್ಧ ಜಾರಿ ನಿರ್ದೇಶನಾಲಯದ (ಇ.ಡಿ.) ವರದಿ ಆಧರಿಸಿ ಎಸಿಬಿ ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ದಾಖಲಿಸಿಕೊಂಡಿತ್ತು. ನಂತರ ಎಸಿಬಿ ರದ್ದುಗೊಂಡ ನಂತರ ಆ ಪ್ರಕರಣದ ಮುಂದುವರಿದ ತನಿಖೆ ಲೋಕಾಯುಕ್ತ ಪೊಲೀಸರು ಕೈಗೆತ್ತಿಕೊಂಡಿದ್ದರು. ಪ್ರಾಥಮಿಕ ಹಂತದ ತನಿಖೆ ಮುಗಿಸಿದ ಪೊಲೀಸರು, ಈಗ ಅಕ್ರಮ ಆಸ್ತಿ ಸಂಪಾದನೆ ಸಂಬಂಧ ವಿಚಾರಣೆಗೆ ಸಚಿವರಿಗೆ ನೋಟಿಸ್‌ ಜಾರಿಗೊಳಿಸಿದ್ದಾರೆ.

ಯಾವುದೇ ಸಬೂಬು ಹೇಳದೆ ಖುದ್ದು ತಾವೇ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಜಮೀರ್‌ ಅವರಿಗೆ ಲೋಕಾಯುಕ್ತ ಇನ್‌ಸ್ಪೆಕ್ಟರ್‌ವೊಬ್ಬರು ಸಚಿವರ ಮನೆಗೆ ಖುದ್ದು ನೋಟಿಸ್‌, ನೀಡಿ ಸೂಕ್ತ ದಾಖಲೆಗಳ ಸಮೇತ ಹಾಜರಾಗುವಂತೆ ಸೂಚಿಸಿದ್ದಾರೆ. ವಿಚಾರಣೆ ವೇಳೆ ಅವರು ನೀಡುವ ಹೇಳಿಕೆ ಹಾಗೂ ಸಲ್ಲಿಸುವ ದಾಖಲೆಗಳನ್ನು ಪರಾಮರ್ಶಿಸಿ ಮುಂದಿನ ತನಿಖೆ ನಡೆಸಲಾಗುತ್ತದೆ ಎಂದು ಮೂಲಗಳು ಹೇಳಿವೆ.

Advertisement

Udayavani is now on Telegram. Click here to join our channel and stay updated with the latest news.

Next