ಬೆಂಗಳೂರು: ಆಧಾರ್ ನೋಂದಣಿ ಪ್ರಕ್ರಿಯೆಯಲ್ಲಿ ನಡೆಯುವ ಅಕ್ರಮಗಳು ರಾಷ್ಟ್ರೀಯ ಭದ್ರತೆಗೆ ಮಾರಕವಾಗಲಿದ್ದು, ಇದರ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಚ್ಚರಿಕೆ ವಹಿಸಬೇಕಿದೆ ಎಂದು ಹೈಕೋರ್ಟ್ ಹೇಳಿದೆ. ಆಧಾರ್ ಕಿಟ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜೆ.ಪಿ. ನಗರ ಠಾಣೆ¿åಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಖಾಸಗಿ ಸಂಸ್ಥೆ “ಎಜುರೇಸ್ ಇಂಡಿಯಾ’ ಇದರ ಸಿಇಒ ಆರ್.ಪಿ. ನರೇಶ್ ಕುಮಾರ್‌ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಆದೇಶದಲ್ಲಿ ಈ ರೀತಿ ಅಭಿಪ್ರಾಯ ವ್ಯಕ್ತಪಡಿಸಿದೆ.
ಇದನ್ನೂ ಓದಿ:–
ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ : 20 ಬಲಿ , 300 ಕ್ಕೂ ಹೆಚ್ಚು ಮಂದಿಗೆ ಗಾಯ
ಉಚಿತವಾಗಿ ವಿತರಿಸಲ್ಪಡುವ ಆಧಾರ್ ಕಿಟ್‌ಗಳನ್ನು ಅರ್ಜಿದಾರರು ಹಣಕ್ಕೆ ಮಾರಾಟ ಮಾಡಿದ್ದಾರೆ ಎಂಬುದು ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳಿಂದ ಗೊತ್ತಾಗುತ್ತದೆ. ಕಿಟ್‌ಗಳನ್ನು 40 ಸಾವಿರದಿಂದ 1.85 ಲಕ್ಷ ರೂ. ವರೆಗೆ ಮಾರಾಟ ಮಾಡಿದ್ದಲ್ಲದೆ, ವಿತರಣೆ ಮಾಡಿರುವ ಪ್ರತಿ ಆಧಾರ್‌ಕಾರ್ಡ್‌ಗೆ 100ರಿಂದ 200 ರೂ.ಗಳನ್ನು ಪಡೆಯಲಾಗಿದೆ ಎಂಬ ಆರೋಪವಿದೆ.
ಆಧಾರ್ ಪ್ರಾಧಿಕಾರದ ಅಧಿಕಾರಿಗಳೇ ಈ ಬಗ್ಗೆ ಪರಿಶೀಲನೆ ನಡೆಸಿ, ದೂರು ದಾಖಲಿಸಿದ್ದಾರೆ ಎಂದು ಹೈಕೋರ್ಟ್ ತಿಳಿಸಿದೆ. ಇತ್ತೀಚಿನ ದಿನಗಳಲ್ಲಿ ಆಧಾರ್ ಅಕ್ರಮ ನೋಂದಣಿಯಂಥ ಪ್ರಕರಣಗಳು ಹೆಚ್ಚುತ್ತಿದ್ದು, ಇದು ದೇಶದ ಭದ್ರತೆಗೆ ಅಪಾಯಕಾರಿಯಾಗಿದೆ ಎಂದು ನ್ಯಾಯಪೀಠ ಅರ್ಜಿದಾರರ ವಿರುದ್ಧದ ಎಫ್ ಐಆರ್ ರದ್ದುಪಡಿಸಲು ನಿರಾಕರಿಸಿದೆ.
ಆಧಾರ್ ಪ್ರಾಧಿಕಾರದ ಪರ ವಾದ ಮಂಡಿಸಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಶಾಂತಿಭೂಷಣ್, ಇದು ಕೇವಲ ವಂಚನೆ ಪ್ರಕರಣವಲ್ಲ. ಅರ್ಜಿದಾರರ ವಿರುದ್ಧ ಫೋರ್ಜರಿ, ನಕಲಿ ದಾಖಲೆಗಳ ಬಳಕೆ, ಕ್ರಿಮಿನಲ್ ಒಳಸಂಚು ಆರೋಪಗಳಿವೆ ಹೀಗಾಗಿ ಎಫ್‌ಐಆರ್ ರದ್ದುಪಡಿಸದಂತೆ ಮನವಿ ಮಾಡಿದ್ದರು.