Advertisement
ಮರಳುಗಾರಿಕೆಗಾಗಿ ದಂಧೆಕೋರರು ರಾತ್ರಿಯ ವೇಳೆ ಬಳಸಿಕೊಳ್ಳಲು ಉಡುಪಿ ಜಿಲ್ಲೆಯ ಶಾಂಭವಿ ನದಿ ದಂಡೆಯಲ್ಲಿ ಇಟ್ಟಿದ್ದ ದೊಡ್ಡ ದೋಣಿಯೊಂದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತಾಗಿ ಪೊಲೀಸರು ದಾಳಿಯಾಗಬಹುದೆಂಬ ಮುನ್ಸೂಚನೆಯನ್ನು ಪಡೆದ ದಂಧೆಕೋರರು ತಾತ್ಕಾಲಿಕವಾಗಿ ತಮ್ಮ ಕಾನೂನು ಬಾಹಿರ ಚಟುವಟಿಕೆಯನ್ನು ನಿಲ್ಲಿಸಿದ್ದರೂ, ಕಣ್ಣುಮುಚ್ಚಾಲೆಯಂತೆ ಶಾಂಭವಿ ಹೊಳೆಯ ಆಚೆಯ ದ.ಕ., ಗಡಿಭಾಗದಿಂದ ಎಲ್ಲ ಬೆಳವಣಿಗೆಗಳನ್ನು ಗಮನಿಸುವ ಇವರು ಸಮಯ ಸಾಧಿಸಿ ತಮ್ಮ ದಂಧೆಯನ್ನು ಮುಂದುವರಿಸುತ್ತಲೇ ಬರುತ್ತಿದ್ದಾರೆ ಎಂದು ಪೊಲೀಸ್ ಮಾಹಿತಿಗಳು ತಿಳಿಸಿವೆ. ಕಂಚಿನಡ್ಕದ ನಿಜಾಮುದ್ದೀನ್, ಅವರಾಲು ಮಟ್ಟುವಿನ ರೋಹಿತ್ ಹಾಗೂ ಪ್ರಶಾಂತ್ ಈ ಅಕ್ರಮ ದಂಧೆಯನ್ನು ನಡೆಸುತ್ತಿರುವವರು. ರಾತ್ರಿಯ ವೇಳೆ ಇಲ್ಲಿನ ನದಿಯಿಂದ ತೆಗೆಯುತ್ತಿರುವ ಮರಳನ್ನು ಉಡುಪಿ ಜಿಲ್ಲೆಯ ಭಾಗದಿಂದ ದ.ಕ. ಜಿಲ್ಲೆಯ ಬಾಂದೊಟ್ಟುವಿನಲ್ಲಿ ಶೇಖರಿಸಿಡುತ್ತಿರುವ ಮಾಹಿತಿಯನ್ನು ಸ್ಥಳೀಯರಿಂದ ಪಡೆದ ಪಡುಬಿದ್ರಿ ಪೊಲೀಸರು ವರದಿಯನ್ನು ಗಣಿ ಹಾಗೂ ಭೂ ವಿಜ್ಞಾನ ಇಲಾಖೆಗೆ ಸಲ್ಲಿಸಿದ್ದಾರೆ.
Related Articles
Advertisement