Advertisement

ಅಕ್ರಮ ಮರಳು ಗಣಿಗಾರಿಕೆ: ಉ.ಪ್ರ.ದ ನಾಲ್ವರ ಬಂಧನ

03:29 PM Jun 06, 2019 | Team Udayavani |

ಮದ್ದೂರು: ಶಿಂಷಾ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆಯಲ್ಲಿ ತೊಡಗಿದ್ದ ಉತ್ತರ ಪ್ರದೇಶದ ಮೂಲದ ನಾಲ್ವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Advertisement

ಉತ್ತರ ಪ್ರದೇಶದ ಚೋಲಲಾಲ್, ವಿನಿಯ, ರಾಜೇಶ್‌, ಕರ್ಮರಾಜ್‌ ಬಂಧಿತರು. ಇವರು ತಾಲೂಕಿನ ಕೂಳಗೆರೆ, ಬನ್ನಹಳ್ಳಿ, ಕೊಕ್ಕರೆ ಬೆಳ್ಳೂರು ಸೇರಿದಂತೆ ಇನ್ನಿತರೆ ಗ್ರಾಮಗಳಲ್ಲಿ ಶಿಂಷಾನದಿ ಪಾತ್ರದಲ್ಲಿ ಬಿಹಾರ, ಉತ್ತರ ಪ್ರದೇಶ ರಾಜ್ಯದ ಯುವಕರು ಮರಳು ಗಣಿಗಾರಿಕೆಯಲ್ಲಿ ತೊಡಗಿದ್ದ ಹಿನ್ನೆಲೆಯಲ್ಲಿ ಪಿಎಸ್‌ಐ ಮಂಜೇಗೌಡ ನೇತೃತ್ವದಲ್ಲಿ ದಾಳಿ ನಡೆಸಿ ಬಂಧಿಸಿದ್ದಾರೆ.

ಬಳಿಕ ತಹಶೀಲ್ದಾರ್‌ ಬಿ.ಗೀತಾ ಅವರ ಮುಂದೆ ಹಾಜರುಪಡಿಸಿದ ಬಳಿಕ ವಿಚಾರಣೆ ನಡೆಸಿದ ತಹಶೀಲ್ದಾರ್‌ ಅವರು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಎಚ್ಚರಿಕೆ: ಶಿಂಷಾ ನದಿ ಪಾತ್ರದಲ್ಲಿ 144 ಸೆಕ್ಷನ್‌ ಜಾರಿಯಾಗಿದ್ದರೂ ಅಕ್ರಮ ಮರಳು ಗಣಿಗಾರಿಕೆ ನಿರಂತರವಾಗಿ ಸಾಗಿದ್ದು ಈಗಾಗಲೇ ಜಿಲ್ಲಾ ಹಾಗೂ ತಾಲೂಕು ಆಡಳಿತ ಕಟ್ಟುನಿಟ್ಟಿನ ಕ್ರಮ ವಹಿಸಿದ್ದು ಅಕ್ರಮ ಮರಳು ಸಾಗಾಣಿಕೆದಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗುವುದು. ಸಾರ್ವಜನಿಕರು ಹಾಗೂ ಸಂಘ, ಸಂಸ್ಥೆಗಳಿಂದ ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ತಮಗೆ ದೂರು ಬಂದಿವೆ. ಕೆಲ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆಯೂ ದೂರುಗಳು ಬಂದಿದ್ದು ಅಂತಹ ಅಧಿಕಾರಿಗಳನ್ನು ಅಮಾನತು ಗೊಳಿಸುವುದಾಗಿ ತಹಶೀಲ್ದಾರ್‌ ಗೀತಾ ಎಚ್ಚರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next