ಬೆಂಗಳೂರು : ಪ್ರಸಕ್ತ ಸಾಲಿನ ಪಿಎಸ್ ಐ ಪರೀಕ್ಷೆಯಲ್ಲಿ ಭಾರೀ ಅಕ್ರಮ ಬೆಳಕಿಗೆ ಬಂದಿರುವ ಹಿನ್ನಲೆಯಲ್ಲಿ 54,289 ಅಭ್ಯರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ಸರಕಾರ ತೀರ್ಮಾನ ಕೈಗೊಂಡಿದೆ. ಈ ಬಗ್ಗೆ ಪರೀಕ್ಷಾರ್ಥಿಗಳು ಆಕ್ರೋಶ ಹೊರ ಹಾಕಿದ್ದಾರೆ.
ಪರೀಕ್ಷಾ ಅಕ್ರಮದಲ್ಲಿ ಸಿಕ್ಕಿ ಬಿದ್ದಿರುವ ಆರೋಪಿಗಳು ಬಿಟ್ಟು ಉಳಿದೆಲ್ಲವರಿಗೂ ಮರು ಪರೀಕ್ಷೆ ನಡೆಸಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದಾರೆ.
545 ಪಿಎಸ್ ಐ ಹುದ್ದೆಗೆ ಮರು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಶೀಘ್ರ ಮರು ಪರೀಕ್ಷೆ ದಿನಾಂಕ ಪ್ರಕಟ ಮಾಡಾಲಾಗುವುದು ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ
ಸರಕಾರದ ನಿರ್ಧಾರಕ್ಕೆ ಪರೀಕ್ಷೆ ಬರೆದ ಹಲವರು ಆಕ್ರೋಶ ಹೊರ ಹಾಕಿದ್ದು, ಕಾನೂನು ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ : ಪಿಎಸ್ಐ ಪರೀಕ್ಷೆ ಅಕ್ರಮ: ಕೊನೆಗೂ ಸಿಐಡಿ ಬಲೆಗೆ ಬಿದ್ದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ
ಈಗಾಗಲೇ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಹಲವು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಸಿಐಡಿ ತನಿಖೆ ಚುರುಕು ಗೊಳಿಸಲಾಗಿದೆ.