ಬೆಂಗಳೂರು: ಶೇಷಾದ್ರಿಪುರದಲ್ಲಿರುವ ನೆಹರು ಪಾರ್ಕ್‌ನಲ್ಲಿ ಅಕ್ರಮವಾಗಿ ನ್ಪೋರ್ಟ್ಸ್ ಕ್ಲಬ್ ನಿರ್ಮಾಣ ಮಾಡಲಾ ಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿ ಸಿದಂತೆ ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ಬಿಬಿಎಂಪಿಗೆ ಹೈಕೋರ್ಟ್ ಕೊನೆಯ ಅವಕಾಶ ನೀಡಿದೆ. ಪಾರ್ಕ್‌ಗಳು ಹಾಗೂ ಆಟದ ಮೈದಾನ ಗಳ ಅಸಮರ್ಪಕ ನಿರ್ವಹಣೆ ಪ್ರಶ್ನಿಸಿ ಹೈಕೋರ್ಟ್ ಕಾನೂನು ಸೇವೆಗಳ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯ ಪೀಠ ಮಂಗಳವಾರ ವಿಚಾರಣೆಗೆ ಬಂದಿತ್ತು.
ಈ ವೇಳೆ ಅರ್ಜಿದಾರರ ಪರ ವಕೀಲ ವೆಂಕಟೇಶ ದಳವಾಯಿ ವಾದ ಮಂಡಿಸಿ, ಶೇಷಾದ್ರಿಪುರದ ನೆಹರು ಪಾರ್ಕ್‌ನಲ್ಲಿ ನೆಹರು ನ್ಪೋರ್ಟ್ಸ್ ಕ್ಲಬ್ ಹೆಸರಿನಲ್ಲಿ ಅನಧಿ ಕೃತ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ ಎಂಬ ವಿಚಾರವನ್ನು ನ್ಯಾಯಪೀಠದ ಗಮನಕ್ಕೆ ತಂದು ಅದಕ್ಕೆ ಸಂಬಂಧಿಸಿದ ಫೋಟೋಗಳನ್ನು ಸಲ್ಲಿಸಲಾಗಿತ್ತು.
ಇದನ್ನೂ ಓದಿ:- ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳ ಬರ: ಹೊಸಬರಿಗೆ ಟಿಕೆಟ್ ನೀಡಲು ಹರಸಾಹಸ
ಅದನ್ನು ಪರಿಶೀಲಿಸಿದ್ದ ನ್ಯಾಯಪೀಠ, ಅರ್ಜಿದಾರರು ಆರೋಪಿಸಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲು ಕೂಡಲೇ ಅಧಿಕಾರಿಯೊಬ್ಬರನ್ನು ಪಾಲಿಕೆ ನಿಯೋಜಿ ಸಬೇಕು. ಆ ಅಧಿಕಾರಿ ಉದ್ಯಾನದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದೆಯೇ ಎಂಬುದನ್ನು ಪರಿಶೀಲಿಸಿ, 3 ವಾರಗಳಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಕಳೆದ ಜುಲೈ 19ರಂದು ನಿರ್ದೇಶಿಸಿತ್ತು. ಆ ನಂತರ ಮೂರ್‍ನಾಲ್ಕು ಬಾರಿ ಅರ್ಜಿ ವಿಚಾರಣೆಗೆ ಬಂದಾಗಲೂ ವರದಿ ಸಲ್ಲಿಸಲು ಪಾಲಿಕೆ ಕಾಲಾವಕಾಶ ಪಡೆದುಕೊಂಡಿತ್ತು. ಆದರೆ, ಈವರೆಗೆ ವರದಿ ಸಲ್ಲಿಸಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ಜೈಲಿಗೆ ಕಳಿಸಿದರೆ ಬುದ್ಧಿ ಬರುತ್ತೆ
ಅರ್ಜಿ ವಿಚಾರಣೆಗೆ ಬಂದಾಗ ವರದಿ ಸಲ್ಲಿಸಲು ಬಿಬಿಎಂಪಿ ಪರ ವಕೀಲರು ಮತ್ತೆ ಕಾಲಾವಕಾಶ ಕೇಳಿದರು. ಇದರಿಂದ ಕೋಪಗೊಂಡ ಮುಖ್ಯ ನ್ಯಾಯಮೂರ್ತಿಗಳು, ಕೋರ್ಟ್ ಆದೇಶಗಳನ್ನು ಅಧಿಕಾರಿಗಳು ತುಂಬಾ ಲಘುವಾಗಿ ಪರಿಗಣಿಸುತ್ತಿದ್ದಾರೆ.
ಅಧಿಕಾರಿಗಳೇ ಹೀಗೆ ಮಾಡುತ್ತಿದ್ದಾರೋ ಅಥವಾ ಸರ್ಕಾರದ ಪರ ವಕೀಲರು ಅವರಿಗೆ ಏನಾಗಲ್ಲ, ನಾವೆಲ್ಲ ನೋಡಿಕೊಳ್ಳುತ್ತೇವೆ ಎಂದು ಧೈರ್ಯ ತುಂಬುತ್ತಿದ್ದಾರೋ ಅರ್ಥವಾಗುತ್ತಿಲ್ಲ. ಪಾಲಿಕೆ ಆಯುಕ್ತನ್ನು ಜೈಲಿಗೆ ಕಳಿಸಿದರೆ ಉಳಿದೆಲ್ಲ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಾರೆ ಎಂದು ಕಟುವಾಗಿ ಹೇಳಿ 10 ದಿನಗಳಲ್ಲಿ ವರದಿ ಸಲ್ಲಿಸಿ ಇದು ಕಡೆಯ ಅವಕಾಶ ಎಂದು ಪಾಲಿಕೆ ವಕೀಲರಿಗೆ ತಾಕೀತು ಮಾಡಿತು.