Advertisement
ಅಂಗನವಾಡಿ ಕೇಂದ್ರಗಳ ದುರಸ್ತಿ ಹೆಸರಿನಲ್ಲಿ ಲಕ್ಷಾಂತರ ರೂ. ಅವ್ಯವಹಾರದ ಮಾತು ಕೇಳಿಬರುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಈ ಕುರಿತು ಮೌನ ವಹಿಸಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.ಪ್ರಸಕ್ತ 2017-18ನೇ ಸಾಲಿನಲ್ಲಿ ಬೀದರ ಜಿಲ್ಲೆಯಲ್ಲಿ 62 ಅಂಗನವಾಡಿ ಕೇಂದ್ರಗಳನ್ನು ದುರಸ್ತಿ ಮಾಡಲಾಗಿದೆ.
ಕೋಳಾರ(ಕೆ) ಗ್ರಾಮದ ಮೂರು ಅಂಗನವಾಡಿ ಕೇಂದ್ರಗಳಿಗೆ ದುರಸ್ತಿ ಹಾಗೂ ಸುಣ್ಣ ಬಣ್ಣ ಮಾಡಲಾಗಿದೆ ಎಂದು ವರದಿಗಳು ಹೇಳುತ್ತಿವೆ. ಆದರೆ, ಮೇಲ್ನೋಟಕ್ಕೆ ಕೆಲ ಅಂಗನವಾಡಿಗಳಲ್ಲಿಗೆ ಕೇವಲ ಸುಣ್ಣ ಬಳಿದು ಹಣ ದುರುಪಯೋಗ ಮಾಡಿಕೊಳ್ಳಲಾಗಿದೆ. ಇನ್ನು ಕೆಲ ಗ್ರಾಮಗಳ ಅಂಗನವಾಡಿ ಕೇಂದ್ರಗಳಲ್ಲಿ ದುರಸ್ತಿ ಕಾರ್ಯವೇ ನಡೆದಿಲ್ಲ ಎಂದು ಅಲ್ಲಿನ ಸ್ಥಳೀಯರು ಆರೋಪಿಸುತ್ತಿದ್ದಾರೆ.
Related Articles
Advertisement
ಈ ಹಿಂದೆ ದುರಸ್ತಿ ಮಾಡಿದ ಅಂಗನವಾಡಿ ಕೇಂದ್ರಗಳನ್ನು ಮತ್ತೆ ದುರಸ್ತಿ ಮಾಡುವ ಪಟ್ಟಿಗೆ ಸೇರಿಸಲಾಗುತ್ತಿದೆ ಎಂಬ ಆರೋಪಗಳು ಕೂಡ ಇವೆ. ಇದು ಅಧಿಕಾರಿಗಳ ಮತ್ತು ಗುತ್ತಿಗೆದಾರರ ಮತ್ತೂಂದು ಮುಖದ ಪರಿಚಯ ಮಾಡಿಸಿಕೊಡುತ್ತದೆ. ಕಳೆದ ವರ್ಷ ದುರಸ್ತಿ ಮಾಡಲಾದ ಅಂಗನವಾಡಿ ಕೇಂದ್ರಗಳು ಈ ವರ್ಷವೂ ದುರಸ್ತಿ ಹೇಗೆ ಬಂದಿತು ಎಂಬ ಪ್ರಶ್ನೆಗೆ ಅಧಿಕಾರಿಗಳೇ ಉತ್ತರಿಸಬೇಕು. ಪ್ರತಿ ವರ್ಷ ದುರಸ್ತಿ ಹೆಸರಿನಲ್ಲಿ ಲಕ್ಷಾಂತರ ರೂ.ಗಳನ್ನು ಕೊಳ್ಳೆ ಹೊಡೆಯಲಾಗುತ್ತಿದ್ದು, ಈಗಾಗಲೇ ಖರ್ಚು ಮಾಡಿದ ಹಣದಲ್ಲಿ ಹೊಸ ಅಂಗನವಾಡಿ ಕೇಂದಗಳೇ ನಿರ್ಮಾಣವಾಗುತ್ತಿದ್ದವು ಎನ್ನುವ ವಾಸ್ತವ ಸಂಗತಿಯನ್ನು ಅಧಿಕಾರಿಗಳು ಮರೆತಂತಿದೆ. ಇನ್ನು ಉಸ್ತುವಾರಿ ನೋಡಿಕೊಳ್ಳಬೇಕಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಈ ಅಂಗನವಾಡಿ ಕೇಂದ್ರ ಪಾಲಿಗೆ ಕಂಟಕವಾಗಿ ಪರಿಣಮಿಸಿದೆ.
ಅಂಗನವಾಡಿ ಕೇಂದ್ರಕ್ಕೆ ಮೂಲ ಸೌಲಭ್ಯ ಕಲ್ಪಿಸಬೇಕಾದ ಗುರುತರ ಜವಾಬ್ದಾರಿ ಹೊಂದಿರುವ ಇಲಾಖೆ ಕೈಕಟ್ಟಿ ಕುಳಿತಿದ್ದು, ದುರಸ್ತಿ ಆಗಬೇಕಾದ ಪಟ್ಟಿ ಕೈಬಿಟ್ಟು ಬೇರೆ ಕೇಂದ್ರ ಆಯ್ಕೆ ಸಂದರ್ಭದಲ್ಲಿ ಅಧಿಕಾರಿಗಳು ಮೌನಕ್ಕೆ ಶರಣಾಗುತ್ತಿರುವುದು ಯಾಕೆ ಎಂಬ ಪ್ರಶ್ನೆಗೆ ಅಧಿಕಾರಿಗಳೇ ಉತ್ತರಿಸಬೇಕು.ದುರ್ಯೋಧನ ಹೂಗಾರ